Home ಆರೋಗ್ಯ ಕೊಲೆಸ್ಟ್ರಾಲ್ ಸಮಸ್ಯೆಯಿಂದ ದೂರ ಇರಲು ಇಲ್ಲಿದೆ ಸಿಂಪಲ್ ಟಿಪ್ಸ್..!

ಕೊಲೆಸ್ಟ್ರಾಲ್ ಸಮಸ್ಯೆಯಿಂದ ದೂರ ಇರಲು ಇಲ್ಲಿದೆ ಸಿಂಪಲ್ ಟಿಪ್ಸ್..!

0
ಕೊಲೆಸ್ಟ್ರಾಲ್ ಸಮಸ್ಯೆಯಿಂದ ದೂರ ಇರಲು ಇಲ್ಲಿದೆ ಸಿಂಪಲ್ ಟಿಪ್ಸ್..!

ಕೊಲೆಸ್ಟ್ರಾಲ್ ಎನ್ನುವುದು ಇತ್ತೀಚಿನ ದಿನಗಳಲ್ಲಿ ಸರ್ವೇಸಾಮಾನ್ಯವಾಗಿ ಬಿಟ್ಟಿದೆ. ಚಿಕ್ಕ ಮಕ್ಕಳಿಂದ ಹಿಡಿದು ವಯಸ್ಸಾದವರವರೆಗೂ ಈ ಸಮಸ್ಯೆ ಬಹುವಾಗಿ ಕಾಡುತ್ತಿರುತ್ತದೆ. ಆಧುನಿಕ ಜೀವನಶೈಲಿಯಿಂದಾಗಿ ಈ ಸಮಸ್ಯೆ ನಮ್ಮನ್ನು ಬಹುಬೇಗ ಆವರಿಸಿಕೊಳ್ಳುತ್ತದೆ. ನಮ್ಮ ಆಹಾರ ಕ್ರಮವೂ ಕೂಡ ಈ ಸಮಸ್ಯೆಗೆ ಮುನ್ನುಡಿಯಾಗಿದೆ. ದೇಹದಲ್ಲಿ ಕೊಲೆಸ್ಟ್ರಾಲ್ ಹೆಚ್ಚಾದರೆ, ಅಪಾಯ ಕಟ್ಟಿಟ್ಟ ಬುತ್ತಿ. ದೇಹದಲ್ಲಿ ಕೊಲೆಸ್ಟ್ರಾಲ್ ಹೆಚ್ಚಾದಾಗ, ಹೃದಯಾಘಾತದ ಸಾಧ್ಯತೆಗಳು ಕೂಡಾ ಹೆಚ್ಚಾಗುತ್ತವೆ. ಈ ಪರಿಸ್ಥಿತಿಯನ್ನು ತಲುಪುವ ಮೊದಲು, ಇದರ ಬಗ್ಗೆ ಕಾಳಜಿ ವಹಿಸುವುದು ಬಹಳ ಉತ್ತಮ.

ದೇಹದಲ್ಲಿ ಕೊಲೆಸ್ಟ್ರಾಲ್ ಪ್ರಮಾಣ ಹೆಚ್ಚಾಗಲು ಮುಖ್ಯ ಕಾರಣವೆಂದರೆ ಕಳಪೆ ಆಹಾರ. ಅಧಿಕ ಕೊಬ್ಬಿನ ಅಂಶವಿರುವ ಆಹಾರವನ್ನು ತೆಗೆದುಕೊಂಡಾಗ, ದೇಹದಲ್ಲಿನ ಕೊಲೆಸ್ಟ್ರಾಲ್ ಪ್ರಮಾಣವು ಹೆಚ್ಚಾಗಲು ಪ್ರಾರಂಭಿಸುತ್ತದೆ. ಅಧಿಕ ಕೊಬ್ಬಿನ ಅಂಶ ಇರುವ ಆಹಾರದಲ್ಲಿ ಡೈರಿ ಉತ್ಪನ್ನಗಳು ಕೂಡಾ ಸೇರಿವೆ. ಅಂತಹ ಪರಿಸ್ಥಿತಿಯಲ್ಲಿ, ಆಹಾರದಲ್ಲಿ ಹಸಿರು ತರಕಾರಿಗಳು ಮತ್ತು ಹಣ್ಣುಗಳನ್ನು ಹೆಚ್ಚಾಗಿ ಸೇವಿಸಲು ಪ್ರಯತ್ನಿಸಿ. ಸಾಧ್ಯವಾದರೆ, ಹೆಚ್ಚು ಹೆಚ್ಚು ಪ್ರೋಟೀನ್ ಭರಿತ ವಸ್ತುಗಳನ್ನು ತಿನ್ನಿ. ಇದರಿಂದ ಅನೇಕ ರೀತಿಯ ಪ್ರಯೋಜನ ಸಿಗುತ್ತದೆ.

ಕೊಲೆಸ್ಟ್ರಾಲ್ ಸಮಸ್ಯೆಯಿಂದ ದೂರವಿರಲು ಮೊದಲನೆಯದಾಗಿ, ಹೊರಗಿನ ಆಹಾರದಿಂದ ದೂರ ಇರಬೇಕು. ಇದರೊಂದಿಗೆ ವ್ಯಾಯಾಮದ ಅಭ್ಯಾಸವನ್ನು ರೂಢಿಸಿಕೊಳ್ಳಬೇಕು. ಇಲ್ಲದಿದ್ದರೆ, ನಿರಂತರ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು. ಸಾಧ್ಯವಾದಷ್ಟು ಸಂತೋಷವಾಗಿರುವುದು ಕೂಡಾ ಬಹಳ ಮುಖ್ಯ. ಏಕೆಂದರೆ ಒತ್ತಡವನ್ನು ತೆಗೆದುಕೊಳ್ಳುವುದರಿಂದ ಕೊಲೆಸ್ಟ್ರಾಲ್ ಸಮಸ್ಯೆ ಕೂಡಾ ಹೆಚ್ಚುತ್ತದೆ. ಇದು ಹೃದಯಾಘಾತದ ಅಪಾಯವನ್ನು ಹೆಚ್ಚಿಸುತ್ತದೆ. ಇದಲ್ಲದೆ, ಮಾಂಸ, ಡೈರಿ ಉತ್ಪನ್ನಗಳಿಂದ ದೂರವಿರಬೇಕು. ಇಲ್ಲದಿದ್ದರೆ ನಿಮ್ಮ ಸಮಸ್ಯೆ ಹೆಚ್ಚಾಗಬಹುದು.

 

LEAVE A REPLY

Please enter your comment!
Please enter your name here