ನಾವು ದಿನನಿತ್ಯ ರೂಢಿಸಿಕೊಳ್ಳುವ ಕೆಲವು ಅಭ್ಯಾಸಗಳು ನಮ್ಮ ಆರೋಗ್ಯವನ್ನು ಕಾಪಾಡುತ್ತದೆ. ದಿನ ಬೆಳಿಗ್ಗೆ ಎದ್ದು ಖಾಲಿ ಹೊಟ್ಟೆಗೆ ಒಂದು ಲೋಟ ಬೆಚ್ಚಗಿನ ನೀರನ್ನು ಕುಡಿಯುವುದು ಆರೋಗ್ಯಕ್ಕೆ ಬಹಳ ಒಳ್ಳೆಯದು.
ಬೆಳಗ್ಗೆ ಎದ್ದ ತಕ್ಷಣ ನೀರು ಕುಡಿಯುವುದರಿಂದ ಸಿಗುವ ಪ್ರಯೋಜನಗಳು:
ನೀರು ದೇಹಕ್ಕೆ ಅತಿ ಮುಖ್ಯವಾದದ್ದು. ಉತ್ತಮ ಆರೋಗ್ಯಕ್ಕೆ ನೀರು ಅತ್ಯಗತ್ಯ ಎಂಬುದರಲ್ಲಿ ಸಂದೇಹವಿಲ್ಲ. ಮೆದುಳಿನ ಕಾರ್ಯ, ದೈಹಿಕ ಕಾರ್ಯಕ್ಷಮತೆಯಿಂದ ಜೀರ್ಣಕ್ರಿಯೆಯವರೆಗೆ ಎಲ್ಲವನ್ನೂ ನಿಯಂತ್ರಿಸುವಲ್ಲಿ ನೀರು ಪ್ರಮುಖ ಪಾತ್ರ ವಹಿಸುತ್ತದೆ.
ಪ್ರತಿದಿನ ಬೆಳಿಗ್ಗೆ ಎದ್ದ ಕೂಡಲೇ ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ಬಿಸಿ ನೀರು ಕುಡಿಯುವುದರಿಂದ ನಮ್ಮ ದೇಹದಲ್ಲಿರುವಂತಹ ವಿಷ ಜೀವಾಣುಗಳು ದೇಹದಿಂದ ಹೊರ ಹೋಗುತ್ತವೆ. ಈ ಬಿಸಿ ನೀರು ನಮ್ಮ ದೇಹದಲ್ಲಿರುವಂತಹ ನಾವು ಸೇವಿಸಿರುವ ಆಹಾರವನ್ನು ತುಂಡರಿಸಿ ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ.
ಹಲವು ಮಂದಿ ತಮ್ಮ ದಿನವನ್ನು ಚಹಾ ಅಥವಾ ಕಾಫಿಯೊಂದಿಗೆ ಆರಂಭಿಸುತ್ತಾರೆ. ಆದರೆ ನೀವು ಒಂದು ಲೋಟ ಬೆಚ್ಚಗಿನ ನೀರಿನಿಂದ ದಿನವನ್ನು ಪ್ರಾರಂಭಿಸಿದರೆ, ಅದು ದೇಹಕ್ಕೆ ಅನೇಕ ಪ್ರಯೋಜನಗಳನ್ನು ನೀಡುತ್ತದೆ. ಇದರಿಂದ ಉದರಕ್ಕೆ ಸಂಬಂಧಿಸಿದ ಸಮಸ್ಯೆಗಳಿಂದ ದೂರ ಇರುವುದರ ಜೊತೆಗೆ ಒತ್ತಡದಿಂದಲೂ ಪರಿಹಾರ ಪಡೆಯಬಹುದು ಎಂದು ಹೇಳಲಾಗುತ್ತದೆ.
ಒಂದು ಲೋಟ ಬಿಸಿ ನೀರು ಮುಂಜಾನೆ ಕುಡಿಯೋದರಿಂದ ದೀರ್ಘಕಾಲದವರೆಗೆ ನಿಮ್ಮನ್ನು ಭಾದಿಸುತ್ತಿರುವ ಮಲಬದ್ಧತೆ ಸಮಸ್ಯೆ ನಿವಾರಣೆಯಾಗುತ್ತದೆ. ಪ್ರತಿದಿನ ಒಂದು ಲೋಟ ಬಿಸಿ ನೀರು ಕುಡಿಯುವುದನ್ನು ಅಭ್ಯಾಸ ಮಾಡಿಕೊಂಡರೆ ನಮ್ಮ ಜೀರ್ಣಕ್ರಿಯೆಗೂ ಸಹ ತುಂಬಾ ಸಹಾಯಕವಾಗುತ್ತದೆ.
ಮುಂಜಾನೆ ಎದ್ದೊಡನೆ ನೀರು ಕುಡಿಯುವುದರಿಂದ ಚರ್ಮದ ಆರೋಗ್ಯ ಸುಧಾರಿಸುತ್ತದೆ. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ಬೆಚ್ಚಗಿನ ನೀರು ಕುಡಿಯುವುದರಿಂದ ನಿಮಗಿರುವ ಹೊಟ್ಟೆ ನೋವು ಸಹ ನಿವಾರಣೆಯಾಗುತ್ತದೆ. ಪ್ರತಿದಿನ ಬೆಳಿಗ್ಗೆ ಎದ್ದ ಬಳಿಕ ಒಂದು ಲೋಟ ಬಿಸಿನೀರು ಕುಡಿಯುವುದರಿಂದ ಜೀರ್ಣಶಕ್ತಿ ಬಲಗೊಳ್ಳುತ್ತದೆ, ಅಂದರೆ ಬಿಸಿನೀರು ಕುಡಿದ ನಂತರ ಆಹಾರ ಚೆನ್ನಾಗಿ ಜೀರ್ಣವಾಗುತ್ತದೆ. ಇದು ನಿಮ್ಮ ಒಟ್ಟಾರೆ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ.
