
ದಕ್ಷಿಣ ಕನ್ನಡ/ಉಡುಪಿ: ರಾಜ್ಯಕ್ಕೆ ಈ ಬಾರಿ ಮುಂಗಾರು ಕೊಂಚ ತಡವಾಗಿ ಆಗಮಿಸಿದ್ದರೂ ಕೂಡ ಈಗಾಗಲೇ ಮಳೆ ಆರಂಭವಾಗಿದೆ. ಆದರೂ ಕೂಡ ಅಲ್ಲಲ್ಲಿ ಅಗತ್ಯ ಇರುವಷ್ಟು ಮಳೆ ಆಗದೇ ಇರುವುದು ರೈತರಿಗೆ ಸಂಕಷ್ಟ ಎದುರಾಗಿದೆ. ಈ ನಡುವೆ ನಿನ್ನೆಯಿಂದ ಕರಾವಳಿಯ ಕೆಲವು ಭಾಗಗಳಲ್ಲಿ ಮಳೆ ಸುರಿದಿದೆ. ಇದೀಗ ಮುಂದಿನ 4 ದಿನಗಳ ಕಾಲ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂದಿನ 4 ದಿನಗಳಲ್ಲಿ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಜೂನ್ 20 ರಂದು ಚಿಕ್ಕಮಗಳೂರು, ಹಾಸನ, ಕೋಲಾರ, ಕೊಡಗು, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ
