
ಬೆಂಗಳೂರು: ರಾಜ್ಯದಲ್ಲಿ ಮುಂಗಾರಿನ ಸಿಂಚನ ಅಲ್ಲಲ್ಲಿ ಆರಂಭವಾಗಿದೆ. ಈಗಾಗಲೇ ಮಳೆ ಆರಂಭವಾಗಿ ಅರ್ಧ ತಿಂಗಳು ಕಳೆಯುತ್ತಿತ್ತು. ಆದರೆ ಈ ಬಾರಿ ಮಾತ್ರ ಕೆಲವೆಡೆ ಮಾತ್ರ ಮಳೆಯಾಗುತ್ತಿದೆ. ರಾಜ್ಯದ ಹಲವೆಡೆ ಮುಂದಿನ 48 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಕಲವು ಜಿಲ್ಲೆಗಳಲ್ಲಿ ಎರಡು ದಿನಗಳ ಕಾಲ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಸೂಚನೆ ನೀಡಿದ್ದಾರೆ. ಇನ್ನು, ಬೆಂಗಳೂರು ಸೇರಿದಂತೆ ತುಮಕೂರು, ಹಾಸನ, ಮಂಡ್ಯ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಇತರ ಕೆಲವು ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಹಿನ್ನೆಲೆ ಮೀನಾಗರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
