
ಬೆಂಗಳೂರು: ನಾಳೆ ಜೂನ್ 21ರಂದು ವಿಶ್ವದಾದ್ಯಂತ ಯೋಗ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಈ ಹಿನ್ನೆಲೆ ರಾಜ್ಯ ಸಕಾರ ಶಿಕ್ಷಣ ಇಲಾಖೆಗೆ ಸೂಚನೆಯನ್ನು ಹೊರಡಿಸಿದ್ದು, ರಾಜ್ಯದ ಎಲ್ಲಾ ಖಾಸಗಿ ಹಾಗೂ ಸಕಾರಿ ಕಾಲೇಜುಗಳಲ್ಲಿ ಯೋಗ ದಿನಾಚರಣೆಯನ್ನು ಕಡ್ಡಾಯವಾಗಿ ಆಚರಿಸುವಂತೆ ಹೇಳಿದೆ.
ರಾಜ್ಯದ ಎಲ್ಲಾ ಪದವಿ ಕಾಲೇಜುಗಳಲ್ಲಿ ಯೋಗ ದಿನಾಚರನೆ ಆಚರಿಸುವುದರ ಜೊತೆಗೆ ಅದರ ಮಹತ್ವ ಮತ್ತು ಪ್ರಯೋಜನಗಳ ಕುರಿತು ವಿದ್ಯಾಥಿಗಳಲ್ಲಿ ಅರಿವು ಮೂಡಿಸಬೇಕು ಎಂದು ತಿಳಿಸಿದೆ. ಇದರೊಂದಿಗೆ ಯೋಗ ದಿನಾಚರಣೆಯ ಫೋಟೋವನ್ನು ಕಾಲೇಜಿನ ವೆಬ್ ಸೈಟ್ ನಲ್ಲಿ ಅಪ್ಲೋಡ್ ಮಾಡುವಂತೆ ಸೂಚಿಸಲಾಗಿದೆ.
