
ದಕ್ಷಿಣ ಕನ್ನಡ: ಕಾಂಗ್ರೆಸ್ ಸಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಐಎಎಸ್, ಐಪಿಎಸ್ ಅಧಿಕಾರಿಗಳ ವರ್ಗಾವಣೆ ಪವ ಮುಂದುವರಿದಿದೆ. 15 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸಿ.ಬಿ.ರಿಷ್ಯಂತ್ ನೇಮಕಗೊಂಡಿದ್ದಾರೆ.
ಈ ಹಿಂದೆ ದಾವಣಗೆರೆಯ ಎಸ್‌ಪಿಯಾಗಿ ಸೇವೆ ಸಲ್ಲಿಸುತ್ತಿದ್ದ ಸಿ.ಬಿ.ರಿಷ್ಯಂತ್ ಅವರು, ವಿಧಾನಸಭೆ ಚುನಾವಣೆಗೂ ಮುನ್ನ ಬೆಂಗಳೂರಿನಲ್ಲಿ ನಿಯೋಜನೆಗೊಂಡಿದ್ದರು. ಇದೀಗ ಇವರು ದಕ್ಷಿಣ ಕನ್ನಡ ಜಿಲ್ಲೆಯ ಎಸ್‌ಪಿಯಾಗಿ ನೇಮಕಗೊಂಡಿದ್ದಾರೆ.
