Home ಕರ್ನಾಟಕ ಜುಲೈ 7ರಂದು ರಾಜ್ಯ ಬಜೆಟ್‌ ಮಂಡನೆ: ವಿಧಾನಸಭಾಧ್ಯಕ್ಷ ಯು.ಟಿ.ಖಾದರ್‌

ಜುಲೈ 7ರಂದು ರಾಜ್ಯ ಬಜೆಟ್‌ ಮಂಡನೆ: ವಿಧಾನಸಭಾಧ್ಯಕ್ಷ ಯು.ಟಿ.ಖಾದರ್‌

0
ಜುಲೈ 7ರಂದು ರಾಜ್ಯ ಬಜೆಟ್‌ ಮಂಡನೆ: ವಿಧಾನಸಭಾಧ್ಯಕ್ಷ ಯು.ಟಿ.ಖಾದರ್‌

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದು ತಿಂಗಳುಗಳೇ ಕಳೆದಿದೆ. ಜನಸ್ನೇಹಿ ಯೋಜನೆಗಳನ್ನು ತರುವಲ್ಲಿ ಸರ್ಕಾರ ಕಾರ್ಯನಿರತವಾಗಿದೆ. ಸಿಎಂ ಸಿದ್ದರಾಮಯ್ಯ ದೆಹಲಿ ಪ್ರವಾಸ ಕೈಗೊಂಡಿದ್ದಾರೆ. ಇದೀಗ ಈ ಬಾರಿಯ ಬಜೆಟ್‌ ಮಂಡನೆಯ ದಿನಾಂಕ ನಿಗದಿಯಾಗಿದ್ದು, ಸಿಎಂ ಸಿದ್ದರಾಮಯ್ಯ ಬಜೆಟ್‌ ಮಂಡನೆ ಮಾಡಲಿದ್ದಾರೆ. ಜುಲೈ 3 ರಿಂದ 14ರವರೆಗೆ ವಿಧಾನಸಭೆಯ ಮೊದಲ ಅಧಿವೇಶನ ನಡೆಯಲಿದೆ. ಜುಲೈ 7 ರಂದು 2023-24ನೇ ಸಾಲಿನ ಬಜೆಟ್‌ ಮಂಡನೆಯಾಗಲಿದೆ.
ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿರುವ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್‌, ವಿಧಾನಸಭೆಯ ಅಧಿವೇಶನದ ಮೊದಲ ದಿನ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಉಭಯ ಸದನಗಳನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ ಎಂದು ತಿಳಿಸಿದರು.

 

LEAVE A REPLY

Please enter your comment!
Please enter your name here