
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಚುನಾವಣಾ ಪೂರ್ವದಲ್ಲಿ ನೀಡಿದ್ದ್ ಭರವಸೆಗಳನ್ನು ಈಡೇರಿಸುವಲ್ಲಿ ನಿರತರಾಗಿದ್ದಾರೆ. ಈಗಾಗಲೇ ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಕೆಗೆ ಅವಕಾಶ ಮಾಡಿಕೊಡಲಾಗಿದ್ದು, ಜನರು ನೂಕು ನುಗ್ಗಲಿನಲ್ಲಿ ಬಂದು ನೋಂದಣಿ ಮಾಡಿಕೊಳ್ಳುತ್ತಿದ್ದಾರೆ. ಇದೇ ಸರಿಯಾದ ಸಮಯ ಎಂದು ಸೈಬರ್ ನವರು ಮನಸ್ಸಿಗೆ ಬಂದಂತೆ ಹಣ ತೆಗೆದುಕೊಳ್ಳುತ್ತಿದ್ದಾರೆ ಎನ್ನುವ ಆರೋಪಗಳು ಕೇಳಿಬರುತ್ತಿದೆ. ಹಿನ್ನೆಲೆ ಅರ್ಜಿ ಸಲ್ಲಿಕೆಗೆ ಯಾವುದೇ ರೀತಿಯ ಹಣ ಪಡೆಯುವಂತಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 5 ಗ್ಯಾರಂಟಿಗಳ ಸದುಪಯೋಗ ಪಡೆಯಲು ಜನರು ಅರ್ಜಿ ಸಲ್ಲಿಕೆಗೆ ಮುಗಿಬಿದ್ದಿದ್ದಾರೆ. ಈ ವೇಳೆ ಸೇವಾಸಿಂಧು, ಬೆಂಗಳೂರು ಒನ್ ಸೇರಿದಂತೆ ಹಲವು ಕಂಪ್ಯೂಟರ್ ಸಂಟರ್‌ಗಳಲ್ಲಿ ಹಣ ವಸೂಲಿ ಮಾಡುತ್ತಿರುವ ಬಗ್ಗೆ ಡಿಸಿಎಂ ಡಿಕೆಶಿ ಅವರ ಗಮನಕ್ಕೆ ಬಂದಿದೆ. ಈ ಬಗ್ಗೆ ಕ್ರಮಕ್ಕೆ ಮುಂದಾಗಿರುವ ಅವರು, ಗ್ಯಾರಂಟಿ ಯೋಜನೆಗಳ ಅರ್ಜಿಗೆ ಹಣ ಪಡೆಯುವಂತಿಲ್ಲ. ಒಂದು ವೇಳೆ ಹಣ ಪಡೆದರೆ ಅಂತಹ ಏಜೆನ್ಸಿಗಳ ಲೈಸನ್ಸ್ ರದ್ದುಗೊಳಿಸಲಾಗುವುದು ಎಂದು ಸೂಚಿಸಿದ್ದಾರೆ.
