
ಬೆಂಗಳೂರು: ರಾಜ್ಯದಲ್ಲಿ ಮುಂಗಾರಿನ ಸಿಂಚನ ಆರಂಭವಾಗಿದೆ. ಕಳೆದ ಕೆಲವು ದಿನಗಳಿಂದ ರಾಜ್ಯದ ಹಲವೆಡೆ ಉತ್ತಮ ಮಳೆಯಾಗುತ್ತಿದೆ. ಇಂದಿನಿಂದ ಜೂನ್ 27 ರವರೆಗೆ ರಾಜ್ಯದ ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ 4ದಿನಗಳ ಕಾಲ ವ್ಯಾಪಕ ಮಳೆಯಾಗಲಿದ್ದು, ಯಲ್ಲೋ ಅಲಟ್ ಘೋಷಣೆ ಮಾಡಲಾಗಿದೆ. ಅಲ್ಲದೇ ಬಿರುಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಮೀನುಗಾರರಿಗೆ ಸಮುದ್ರಕ್ಕಿಳಿಯದಂತೆ ಎಚ್ಚರಿಕೆ ನೀಡಲಾಗಿದೆ.
