
ಬೆಂಗಳೂರು: ಕಾಂಗ್ರೆಸ್ ಸರ್ಕಾರ ರಾಜ್ಯಕ್ಕೆ ನೀಡಿರುವ 5 ಗ್ಯಾರಂಟಿಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆ ಕೂಡ ಒಂದು. ಈ ಯೋಜನೆಯಡಿ ಪಡಿತರ ಚೀಟಿದಾರರಿಗೆ ತಲಾ ಕೆ.ಜಿ.10 ಅಕ್ಕಿಯನ್ನು ನೀಡಲಾಗುತ್ತದೆ. ಆದರೆ ಹೆಚ್ಚುವರಿ ಅಕ್ಕಿ ನೀಡಲು ಕೇಂದ್ರ ಸರ್ಕಾರ ನಿರಾಕರಿಸುತ್ತಿದೆ ಎಂದು ರಾಜ್ಯ ಸರ್ಕಾರ ಆರೋಪ ಮಾಡುತ್ತಿದೆ. ಈ ಹಿನ್ನೆಲೆ ರಾಜ್ಯಕ್ಕೆ ತೆಲಂಗಾಣದಿಂದ ಭತ್ತ, ಛತ್ತೀಸಗಢದಿಂದ ಅಕ್ಕಿ ತರಿಸುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಜನತೆಗೆ 10 ಕೆಜಿ ಅಕ್ಕಿ ಪೂರೈಸಲು ನಾವು ಬದ್ಧರಿದ್ದೇವೆ. ಈ ಹಿನ್ನೆಲೆ ಛತ್ತೀಸ್ಗಡದಿಂದ ಅಕ್ಕಿಯನ್ನು ತರಿಸುತ್ತೇವೆ. ಛತ್ತೀಸ್ಗಢ ಸರ್ಕಾರ ಕೂಡ ಕನಾಟಕಕ್ಕೆ 1.5 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಕೊಡುವುದಾಗಿ ಹೇಳಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
