
ಮಂಗಳೂರು: ಕ್ರಿಕೆಟಿಗ ಕೆ.ಎಲ್.ರಾಹುಲ್ ಅವರು ಇಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ಕೊಟ್ಟು ಮಂಜುನಾಥಸ್ವಾಮಿಯ ದರ್ಶನವನ್ನು ಪಡೆದರು.
ಬಳಿಕ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ, ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಇದೇ ವೇಳೆ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ರಾಹುಲ್ ಗೆ ಶಾಲು ಹೊದಿಸಿ ಬೆಳ್ಳಿ ನಾಣ್ಯ ನೀಡುವುದರ ಜೊತೆಗೆ ಗೋವಿನ ಕಂಚಿನ ಪ್ರತಿಮೆಯನ್ನು ನೀಡಿ ಗೌರವಿಸಿದರು.
