
ಉಡಪಿ: ಖಾಸಗಿ ಕಂಪೆನಿಯೊಂದರಲ್ಲಿ ಅಕೌಂಟ್ಸ್ ಮ್ಯಾನೇಜರ್ ಆಗಿ ಕೆಲಸ ಮಾಡಿಕೊಂಡಿದ್ದ, ಪ್ರಸ್ತುತ ವರ್ಕ್ ಫ್ರಮ್ ಹೋಮ್ ನಲ್ಲಿ ಕೆಲಸ ಮಾಡಿಕೊಂಡಿದ್ದ ವ್ಯಕ್ತಿಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಣಿಪಾಲ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಮೃತರನ್ನು ಪ್ರಮೋದ್ ಅಂಗಾರ ಜತ್ತನ್ ಎಂದು ಗುರುತಿಸಲಾಗಿದೆ. ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯ ಕೋಣೆಯಲ್ಲಿ ನೇಣು ಬಿಗಿದುಕೊಂಡಿದ್ದಾರೆ ಎಂದು ಆತನ ಪತ್ನಿ ದೂರು ನೀಡಿದ್ದು, ಈ ಸಂಬಂಧ ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
