
ಬೆಂಗಳೂರು: ರಾಜ್ಯದಲ್ಲಿ ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಸರ್ಕಾರ ನೀಡಿರುವ 5 ಭರವಸೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಗೆ ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಸರ್ಕಾರದ ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಗೃಹಲಕ್ಷ್ಮೀ ಯೋಜನೆಯಡಿ ಪ್ರತಿಕುಟುಂಬದ ಮಹಿಳೆಯ ಖಾತೆಗೆ ರೂ 2000 ಜಮಾ ಮಾಡಲಾಗುತ್ತದೆ. ಈ ಯೋಜನೆಯ ಸದುಪಯೋಗ ಪಡೆಯಲು ರೇಷನ್ ಕಾರ್ಡ್, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ಬುಕ್ ಹಾಗೂ ಯಾವುದದಾದರೂ ಒಂದು ಗುರುತಿನ ಚೀಟಿಯೊಂದಿಗೆ ನಿಮ್ಮ ಹತ್ತಿರದ ಗ್ರಾಮ ಒನ್, ಕರ್ನಾಟಕ ಒನ್ ಬೆಂಗಳೂರು ಒನ್ ಕೇಂದ್ರಗಳಲ್ಲಿ ಹೋಗಿ ಸಲ್ಲಿಸಬಹುದಾಗಿದೆ. ಇನ್ನು, ಯೋಜನೆಗಾಗಿ ಪ್ರತ್ಯೇಕ ಆಯಪ್ ಸಿದ್ಧಪಡಿಸಲಾಗಿದ್ದು, ಈ ಆಯಪ್ ಮೂಲಕ ಅರ್ಜಿ ಸಲ್ಲಿಸಲು ವ್ಯವಸ್ಥೆ ಮಾಡಲಾಗುತ್ತದೆ ಎಂದು ಹೇಳಲಾಗಿದೆ. ಈ ಯೋಜನೆಗೆ ಅಜೀ ಸಲ್ಲಿಸಲು ಕೊನೆಯ ದಿನಾಂಕ ಇರುವುದಿಲ್ಲ. ಅಜಿ ಸಲ್ಲಿಸಿದವರಿಗೆ ಆಗಸ್ಟ್ 17ಅಥವಾ 18ರಂದು ಹಣ ಜಮಾ ಮಾಡಲಾಗುತ್ತದೆ.
