
ಬೆಂಗಳೂರು: ರಾಜ್ಯದ ವಿವಿಧೆಡೆ ಇಂದು ಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಳಿ ವೇಳೆ ಹಲವು ದಾಖಲೆಗಳನ್ನು ಪರಿಶಿಲನೆ ನಡೆಸುತ್ತಿದ್ದಾರೆ.
ಭ್ರಷ್ಟಾಚಾರದ ಆರೋಪದ ಮೇಲೆ ಬಾಗಲಕೋಟೆಯಲ್ಲಿ ಇಬ್ಬರು ಕೃಷಿ ಅಧಿಕಾರಿಗಳ ಮನೆಗಳ ಮೇಲೆ ಲೋಕಾಯುಕ್ತರು ದಾಳಿ ನಡೆಸಿದ್ದು, ವಿಜಯಪುರ ಜಿಲ್ಲೆಯ ನಾಲ್ಕು ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಳಗಾವಿಯ ಹೆಸ್ಕಾಂ ಕಾಯನಿವಾಹಕ ಇಂಜಿನಿಯರ್ ಮನೆಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಯಾದಗಿರಿ ನಗರದ ಪಿಡಬ್ಲೂಡಿ ಎಇಇ ವಿಶ್ವನಾಥ ರೆಡ್ಡಿ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇನ್ನು ಕಲಬುರಗಿ, ತುಮಕೂರು, ಚಿಕ್ಕಮಗಳೂರು, ಯಾದಗಿರಿ ಸೇರಿದಂತೆ ವಿವಿಧೆಡೆ ಲೋಕಾಯುಕ್ತ ದಾಳಿ ನಡೆಸಿದ್ದಾರೆ.
