
ಮಂಗಳೂರು: ಗುಡ್ಡದ ತುದಿಯಲ್ಲಿ ನಿಂತು ಯುವಕನೋರ್ವ ತಲೆಗೆ ಗುಂಡು ಹಾರಿಸಿಕೊಂಡು ಅತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಬರಡ್ಕದಲ್ಲಿ ನಡೆದಿದೆ.
ಉಬರಡ್ಕದ ಬೆಳ್ರಂಪಾಡಿಯ ಮನೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ರವಿ ಮೃತ ಯುವಕ. ಈತ ಮಂಗಳವಾರ ರಾತ್ರಿ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಘಟನಾ ಸ್ಥಳಕ್ಕೆ ಸುಳ್ಯ ಪೊಲೀಸರು ಭೇಟಿ ಕೊಟ್ಟಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆತ್ಮಹತ್ಯೆ ನಿಖರ ಕಾರಣ ತಿಳಿದುಬಂದಿಲ್ಲ.
