
ಮಂಗಳೂರು: ಉದ್ಯಮಿಯೊಬ್ಬರನ್ನು ಹನಿಟ್ರ್ಯಾಪ್ ಮಾಡಿ ಹಣ ಸುಲಿಗೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಮಂದಿಯನ್ನು ಬಂಧಿಸುವಲ್ಲಿ ಮಂಗಳೂರು ನಗರದ ಕಾವೂರು ಪೊಲೀಸರು ಯಶಸ್ವಿಯಾಗಿದ್ದಾರೆ.
ಸುರೇಂದ್ರೆ(29), ಮುರಳಿ ಕೃಷ್ಣ(26) ಕಿಶೋರ್(32), ಸುಶಾಂತ್(23), ಲಿಖಿತ್(23), ತರುಣ್(20) ಮತ್ತು ಅಕ್ಷತಾ(24) ಬಂಧಿತ ಆರೋಪಿಗಳು.
ಮಂಗಳೂರು ನಗರದ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಬೊಂದೇಲ್ ಪರಿಸರದಲ್ಲಿ ಉದ್ಯಮಿಯೊಬ್ಬರನ್ನು ಹನಿಟ್ರ್ಯಾಪ್ ಮಾಡಿ ಹಣ ಸುಲಿಗೆ ಮಾಡಲಾಗಿತ್ತು. ಈ ಬಗ್ಗೆ ಕೇಸ್ ದಾಖಲಿಸಿಕೊಂಡ ಪೊಲೀಸರು ಇದೀಗ ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದು, ಆರೋಪಿಗಳನ್ನು ಬಂಧಿಸಿದ್ದಾರೆ.
