
ಬೆಂಗಳೂರು: ರಾಜ್ಯದಲ್ಲಿ ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಸರ್ಕಾರ ನೀಡಿದ್ದ 5 ಗ್ಯಾರಂಟಿಗಳಲ್ಲಿ ಒಂದೊಂದಾಗಿ ಎಲ್ಲವನ್ನೂ ಅನುಷ್ಠಾನಗೊಳಿಸುತ್ತಿದೆ. ಜುಲೈ 1 ರಿಂದ ಗೃಹಜ್ಯೋತಿ, ಅನ್ನಭಾಗ್ಯ ಯೋಜನೆಗೆ ಚಾಲನೆ ದೊರೆತಿದೆ. ಅನ್ನಭಾಗ್ಯ ಯೋಜನೆಯಡಿ ಪಡಿತರ ಚೀಟಿದಾರರಿಗೆ 10 ಕೆ.ಜಿ ಅಕ್ಕಿ ನೀಡುವುದಾಗಿ ಸಕಾರ ಹೇಳಿತ್ತು. ಆದರೆ ಸಾಕಷ್ಟು ಪ್ರಮಾಣದ ಅಕ್ಕಿ ಪೂರೈಕೆ ಇಲ್ಲದ ಹಿನ್ನೆಲೆ ಇದೀ 5 ಕೆ.ಜಿ ಅಕ್ಕಿ ಬದಲಾಗಿ ಹಣ ನೀಡಲು ಸಕಾರ ನಿಧಾರ ಮಾಡಿದೆ. ಈ ಪ್ರಕ್ರಿಯೆ ಜುಲೈ 1 ರಿಂದ ಅನುಷ್ಠಾನಗೊಳಿಸಲಾಗುವುದು ಎಂದು ಹೇಳಲಾಗಿತ್ತು. ಇದೀ ಜುಲೈ 10 ರಿಂದ ಈ ಯೋಜನೆ ಜಾರಿಗೆ ಬರಲಿದೆ ಎನ್ನಲಾಗಿದೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಅನ್ನಭಾಗ್ಯದ ಹಣವನ್ನು ಜುಲೈ 10 ರ ನಂತರ ಆರಂಭಿಸಲಾಗುತ್ತದೆ ಎಂದು ಹೇಳಿದ್ದಾರೆ. ಈ ತಿಂಗಳ ಹಣವನ್ನು ಇದೇ ತಿಂಗಳು ಪಡಿತರ ಕಾಡುದಾರರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುವುದು ಎಂದಿದ್ದಾರೆ.
