
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ತಿಂಗಳುಗಳೇ ಕಳೆದಿದೆ. ಜನಸ್ನೇಹಿ ಯೋಜನೆಗಳನ್ನು ತರುವಲ್ಲಿ ಸರ್ಕಾರ ಕಾಯನಿರತವಾಗಿದೆ. ಈಗಾಗಲೇ ಕಾ,ಗ್ರೆಸ್ ಸಕಾರದ 5 ಗ್ಯಾರಂಟಿಗಳು ಅನುಷ್ಠಾನಗೊಂಡಿದೆ. ನಾಳೆಯಿಂದ ಈ ಬಾರಿಯ ವಿಧಾನಮಂಡಲ ಬಜೆಟ್ ಅಧಿವೇಶನ ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಮಂಡನೆ ಮಾಡಲಿದ್ದಾರೆ.
ಜುಲೈ 3 ರಿಂದ 14 ರವರೆಗೆ ವಿಧಾನಸಭೆಯ ಮೊದಲ ಅಧಿವೇಶನ ನಡೆಯಲಿದೆ. ಜುಲೈ 7 ರಂದು 2023-24 ನೇ ಸಾಲಿನ ಬಜೆಟ್ ಮಂಡನೆಯಾಗಲಿದೆ. ವಿಧಾನಸಭೆಯ ಅಧವೇಶನದ ಮೊದಲ ದಿನ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಉಭಯ ಸದನಗಳನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಇನ್ನು, ಜುಲೈ 3 ರಿಂದ ವಿಧಾನಸೌಧದ ಸುತ್ತಮುತ್ತ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
