
ಮುಂಬಯಿ: ಅಮೆರಿಕದ ಲಾಸ್ ಏಂಜಲೀಸ್ ನಲ್ಲಿ ಸಿನಿಮಾ ಶೂಟಿಂಗ್ ಮಾಡುವ ವೇಳೆ ಬಾಲಿವುಡ್ ನಟ ಶಾರುಖ್ ಖಾನ್ ಅಪಘಾತಕ್ಕೀಡಾಗಿದ್ದಾರೆ. ಅಪಘಾತದಲ್ಲಿ ಶಾರುಖ್ ಖಾನ್ ಅವರ ಮೂಗಿಗೆ ಗಾಯವಾಗಿದ್ದು, ತಕ್ಷಣ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ವರದಿಯಾಗಿದೆ.
ಘಟನೆಯಲ್ಲಿ ಮೂಗಿಗೆ ಪೆಟ್ಟುಬಿದ್ದಿದ್ದರಿಂದ ಗಾಯವಾಗಿ ರಕ್ತ ಸುರಿಯುತ್ತಿದ್ದ ಹಿನ್ನೆಲೆ ರಕ್ತ ನಿಲ್ಲಲು ಶಾರುಖ್ ಖಾನ್ ಅವರ ಮೂಗಿಗೆ ಶಸ್ತ್ರಚಿಕಿತ್ಸೆಯನ್ನು ಮಾಡಲಾಗಿದೆ. ಸದ್ಯ ಶಾರುಖ್ ಖಾನ್ ಅವರು ಅಮೆರಿಕದಿಂದ ವಾಪಸ್ ಆಗಿದ್ದು, ತಮ್ಮ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದು ಹೇಳಲಾಗಿದೆ.
