
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಶನಿವಾರ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದರು.
ದೇವರಿಗೆ ವಿಶೆಷ ಪೂಜೆ ಸಲ್ಲಿಸಿದ ಸಚಿವರು, ಬಳಿಕ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ನಂತರ ಕನ್ಯಾಡಿ ಶ್ರೀ ರಾಮಕ್ಷೇತ್ರದ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರ ಮಠಕ್ಕೆ ಭೇಟಿ ನೀಡಿ, ಅವರ ಆಶೀವಾದ ಪಡೆದುಕೊಂಡರು.
ಈ ವೇಳೆ ಮಾಜಿ ಸಚಿವ ಅಭಯಚಂದ್ರ ಜೈನ್, ಎಂ.ಎಲ್.ಸಿ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಕೆಪಿಸಿಸಿ ಪ್ರಧಾನ ಕಾಯದಶಿ ರಕ್ಷಿತ್ ಶಿವರಾಮ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶೈಲೇಶ್ ಕುಮಾರ್ ಹಾಗೂ ಇತರರು ಉಪಸ್ಥಿತರಿದ್ದರು.
