
ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹಾಗೂ ಇಸ್ರೋ ಅಧ್ಯಕ್ಷ ಸೋಮನಾಥ್ ಅವರು ಬೆಂಗಳೂರು ವಿಶ್ವವಿದ್ಯಾಲಯ ಕೊಡಮಾಡುವ ಗೌರವ ಡಾಕ್ಟರೇಟ್ ಪದವಿಗೆ ಆಯ್ಕೆಯಾಗಿದ್ದಾರೆ.
ಬೆಂಗಳೂರು ವಿಶ್ವವಿದ್ಯಾಲಯದ ಆಯ್ಕೆ ಸಮಿತಿ ಶಿಫಾರಸ್ಸು ಮಾಡಿರುವ ಪಟ್ಟಿಗೆ ರಾಜ್ಯಪಾಲ ಥಾವರ್‌ಚಂದ್ರ ಗೆಹ್ಲೋಟ್ ಅನುಮೋದನೆ ನೀಡಿದ್ದು, ರಾಜ್ಯ ಹಾಗೂ ರಾಷ್ಟ್ರಕ್ಕೆ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರಿಗೆ ಗೌರವ ಡಾಕ್ಟರೇಟ್ ನೀಡಲು ವಿವಿ ನಿಧರಿಸಿದೆ.
ಚಂದ್ರಯಾನ-3 ಯಲ್ಲಿ ಇಸ್ರೋ ಅಧ್ಯಕ್ಷ ಸೋಮನಾಥ್ ಅವರ ಸಾಧನೆಯನ್ನು ಶ್ಲಾಘಿಸಿ ಡಾಕ್ಟರೇಟ್ ಪದವಿ ನೀಡಲು ನಿಧರಿಸಿದೆ.
ಇನ್ನು, ಬೆಂಗಳೂರು ವಿಶ್ವವಿದ್ಯಾಲಯದ 58 ನೇ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಅನ್ನು ಪ್ರದಾನ ಮಾಡಲಾಗುತ್ತಿದ್ದು, ಶೀಘ್ರದಲ್ಲೇ ಘಟಿಕೋತ್ಸವದ ದಿನಾಂಕ ಘೋಷಣೆ ಮಾಡುವುದಾಗಿ ಬೆಂಗಳೂರು ವಿವಿ ತಿಳಿಸಿದೆ.
