
ಹಾಸನ: ಜಿಲ್ಲೆಯ ಅರಕಲಗೂಡು ತಾಲೂಕಿನ ಮಧುರನಹಳ್ಳಿಯಲ್ಲಿ ಕಾಲುಜಾರಿ ನಾಲೆಗೆ ಬಿದ್ದು ಬಾಲಕಿಯೋರ್ವಳು ಮೃತಪಟ್ಟ ಘಟನೆ ನಡೆದಿದೆ.
ಮೃತ ಬಾಲಕಿಯನ್ನು ಸುಪ್ರಿತಾ(5) ಎಂದು ಗುರುತಿಸಲಾಗಿದೆ. ಕರ್ನಾಟಕ ಬಂದ್ ಹಿನ್ನೆಲೆ ಶುಕ್ರವಾರ ಶಾಲೆಗೆ ರಜೆ ಇದ್ದ ಕಾರಣ ಹಾರಂಗಿ ಬಲದಂಡೆ ನಾಲೆಗೆ ಆಟವಾಡಲು ಹೋಗಿದ್ದಾಗ ಕಾಲು ಜಾರಿ ಬಿದ್ದು ಬಾಲಕಿ ಮೃತಪಟ್ಟಿದ್ದಾಳೆ. ಈ ಬಗ್ಗೆ ಅರಕಲಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
