
ಕಾರ್ಕಳ: ಕಳೆದೆರಡು ದಿನಗಳಿಂದ ನಾಪತ್ತೆಯಾಗಿದ್ದ ಯುವಕ ಬುಧವಾರ ಮುಂಜಾನೆ ಕಾರ್ಕಳ
ಪುರಸಭಾ ವ್ಯಾಪ್ತಿಯ ಕಾವೇರಡ್ಕ ಅಯೋಧ್ಯಾ ನಗರ ದುಗ ತೆಳ್ಳಾರು ಸಂಪರ್ಕ ಸೇತುವೆಯಡಿ ಶವವಾಗಿ ಪತ್ತೆಯಾಗಿದ್ದಾನೆ. ಮೃತ ಯುವಕನನ್ನು ದುರ್ಗಾ ಗ್ರಾಮದ ಸಂದೇಶ್ ಶೆಟ್ಟಿ ಎಂದು ಗುರುತಿಸಲಾಗಿದೆ. ಈತ ಕೂಲಿ ಕಾರ್ಮಿಕನಾಗಿದ್ದು, ಕಳೆದೆರಡು ದಿನಗಳಿಂದ ನಾಪತ್ತೆಯಾಗಿದ್ದರು. ಈ ಹಿನ್ನೆಲೆ ಆತನ ಮನೆಯವರು ಹಾಗೂ ಸ್ಥಳೀಯರು ಸಾಕಷ್ಟು ಹುಡುಕಾಟ ನಡೆಸಿದ್ದರೂ ಕೂಡ ಯುವಕ ಪತ್ತೆಯಾಗಿರಲಿಲ್ಲ. ಈತ ನಾಪತ್ತೆಯಾಗಿರುವ ಬಗ್ಗೆ ಅ.3 ರಂದು ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಇನ್ನು, ಸೇತುವೆಯಲ್ಲಿ ಶವವನ್ನು ನೋಡಿದ ಸ್ಥಳೀಯರು ಕಾರ್ಕಳ ನಗರ ಪೊಲೀಸರಿಗೆ ಮಾಹಿತಿ ನೀಡಿದ್ದು, ತಕ್ಷಣವೇ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಶವವನ್ನು ಮೇಲಕ್ಕೆತ್ತಿದ್ದಾರೆ. ಮೃತ ಯುವಕ ತಂದೆ, ತಾಯಿ, ಸಹೋದರ ಮತ್ತು ಸಹೋದರಿಯನ್ನು ಅಗಲಿದ್ದಾರೆ.
