Home ಸುದ್ದಿಗಳು ರಾಷ್ಟ್ರೀಯ ಮುಂಬೈನ ಕಟ್ಟಡದಲ್ಲಿ ಭೀಕರ ಅಗ್ನಿ ದುರಂತ: 7ಮಂದಿ ಸಜೀವ ದಹನ..!

ಮುಂಬೈನ ಕಟ್ಟಡದಲ್ಲಿ ಭೀಕರ ಅಗ್ನಿ ದುರಂತ: 7ಮಂದಿ ಸಜೀವ ದಹನ..!

0
ಮುಂಬೈನ ಕಟ್ಟಡದಲ್ಲಿ ಭೀಕರ ಅಗ್ನಿ ದುರಂತ: 7ಮಂದಿ ಸಜೀವ ದಹನ..!

ಮುಂಬೈ: ಭೀಕರ ಅಗ್ನಿ ದುರಂತ ಸಂಭವಿಸಿ 7 ಜನ ಸಜೀವ ದಹನ ಹೊಂದಿ, 40ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮುಂಬೈನ ಗೋರೆಗಾಂವ್‌ ಪ್ರದೇಶದಲ್ಲಿ ನಡೆದಿದೆ.

ಮೃತಪಟ್ಟವರಲ್ಲಿ ಇಬ್ಬರು ಪುರುಷರು ಹಾಗೂ ಐವರು ಮಹಿಳೆಯರು ಸೇರಿದ್ದಾರೆ ಎಂದು ಹೇಳಲಾಗಿದೆ. ಘಟನೆಯಲ್ಲಿ ಗಾಯಗೊಂಡವರನ್ನು ಹೆಚ್‌ಬಿಟಿ ಹಾಗೂ ಕೂಪರ್‌ ಆಸ್ಪತ್ರೆಗೆ ಸಾಗಿಸಲಾಗಿದೆ. ಮುಂಜಾನೆ 3ಗಂಟೆ ವೇಳೆಗೆ ಗೋರೆಗಾಂವ್‌ ನ ಐದು ಅಂತಸ್ತಿನ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ತಕ್ಷಣ ಸ್ಥಳಕ್ಕೆ ದೌಡಾಯಿಸಿದ 10 ಅಗ್ನಿ ಶಾಮಕ ದಳದ ವಾಹನಗಳು ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಈವರೆಗೆ 40ಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದೆ ಎನ್ನಲಾಗಿದೆ. ಪೊಲೀಸರು ಹಾಗೂ ಸ್ಥಳೀಯರ ಸಹಕಾರದಿಂದ ರಕ್ಷಣಾ ಕಾಯಾಚರಣೆ ನಡೆಸಲಾಗಿದೆ ಎನ್ನಲಾಗಿದೆ. ಇನ್ನು, ಅಗ್ನಿ ಅಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.

 

LEAVE A REPLY

Please enter your comment!
Please enter your name here