
ಶಿವಮೊಗ್ಗ: ತಾಲೂಕಿನ ಹೊಸನಗರ ರಸ್ತೆಯ ಅರಳಸುರುಳಿ ರೈಸ್ಮಿಲ್ ಸಮೀಪ ಮನೆಯೊಂದರಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ ಮೂವರು ಸಜೀವ ದಹನ ಹೊಂದಿ, ಓರ್ವ ಗಂಭೀರವಾಗಿ ಗಾಯಗೊಂಡಿರುವ ದಾರುಣ ಘಟನೆ ರವಿವಾರ ನಡೆದಿದೆ.
ಮೃತರನ್ನು ರಾಘವೇಂದ್ರ ಕೆ.ಕುಡ(63), ನಾಗರತ್ನ(54), ಶ್ರೀರಾಮ್(34) ಎಂದು ಗುರುತಿಸಲಾಗಿದೆ. ದುರಂತದಲ್ಲಿ ಭರತ್(30) ಗಂಭೀರವಾಗಿ ಗಾಯಗೊಂಡಿದ್ದು, ತೀರ್ಥಹಳ್ಳಿಯ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿದೆ. ರಾಘವೇಂದ್ರ ಕೆ.ಕುಡ ಅವರು ವೃತ್ತಿಯಲ್ಲಿ ಅರ್ಚಕರಾಗಿದ್ದರು ಎನ್ನಲಾಗಿದ್ದು, ಸುತ್ತಮುತ್ತಲಿನ ಗ್ರಾಮಸ್ಥರು ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ.
