ಪುತ್ತೂರು:ಇಲ್ಲಿನ ಸಂಪ್ಯ ಬಳಿ ಪಿಯುಸಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಯೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ಕುರಿಯ ಪಡ್ಪು ನಿವಾಸಿ, ಫಿಲೋಮಿನಾ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ವೀಕ್ಷಿತ್(17) ಎಂದು ಗುರುತಿಸಲಾಗಿದೆ.
ಇನ್ನು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಮೃತರು ತಂದೆ, ತಾಯಿ ಸಹೋದರ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ. ಘಟನಾ ಸ್ಥಳಕ್ಕೆ ಸಂಪ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
