
ಮಂಗಳೂರು: ಮನೆ ನಿರ್ಮಾಣ ತೆರವು ಕಾರ್ಯಾಚರಣೆ ವೇಳೆ ಅರಣ್ಯಾಧಿಕಾರಿ ಹಾಗೂ ಶಾಸಕರ ನಡುವೆ ಮಾತಿನ ಚಕಮಕಿ ನಡೆದು ಅರಣ್ಯಾಧಿಕಾರಿಯನ್ನು ನಿಂದಿಸಿದ ಆರೋಪದ ಮೇಲೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಚಾರ್ಮಾಡಿ ಅರಣ್ಯ ಪ್ರದೇಶದಲ್ಲಿ ಮನೆ ನಿರ್ಮಾಣ ತೆರವು ಕಾರ್ಯಾಚರಣೆ ಸಂದರ್ಭ ಗಲಾಟೆ ನಡೆದಿದ್ದು, ಶಾಸಕ ಹರೀಶ್ ಪೂಂಜಾ ಅವರು ಅರಣ್ಯಾಧಿಕಾರಿ ಜಯಪ್ರಕಾಶ್ ಎಂಬುವವರಿಗೆ ಅವ್ಯಾಚ್ಯ ಶಬ್ದಗಳಿಂದ ನಿಂದಿಸಿದ್ದರು ಎಂದು ಆರೋಪಿಸಲಾಗಿದೆ.
ಅಕ್ಟೋಬರ್ 9 ರಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಅರಣ್ಯಾಧಿಕಾರಿ ಕೆ.ಕೆ. ಜಯಪ್ರಕಾಶ್ ಧರ್ಮಸ್ಥಳ ಠಾಣೆಯಲ್ಲಿ ಶಾಸಕ ಹರೀಶ್ ಪೂಂಜಾ ಅವರ ವಿರುದ್ಧ ದೂರು ನೀಡಿದ್ದಾರೆ. ಈ ಹಿನ್ನೆಲೆ ಶಾಸಕರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದ್ದು, ಸದ್ಯ ಶಾಸಕ ಹರೀಶ್ ಪೂಂಜಾ ಬಂಧನದ ಭೀತಿಯಲ್ಲಿದ್ದಾರೆ ಎನ್ನಲಾಗಿದೆ.
