
ಕುಂದಾಪುರ: ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ಸೊಂದು ಡಿವೈಡರ್‌ಗೆ ತಾಗಿದ ಪರಿಣಾಮ ಬಸ್ ಪಲ್ಟಿಯಾಗಿ ಬಸ್‌ನಲ್ಲಿದ್ದ 15 ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಬುಧವಾರ ಸಂಜೆ ರಾಷ್ಟ್ರೀಯ ಹೆದ್ದಾರಿ 66 ರ ಮುಳ್ಳಿಕಟ್ಟೆ ಸಮೀಪದ ಅರಾಟೆ ಎಂಬಲ್ಲಿ ನಡೆದಿದೆ.
ಅದೃಷ್ಟವಶಾತ್ ಅಪಘಾತದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಚಾಲಕನ ಅತೀ ವೇಗದ ಚಾಲನೆಯೇ ಈ ಅವಘಡಕ್ಕೆ ಕಾರಣ ಎಂದು ಹೇಳಲಾಗಿದೆ. ಗಾಯಾಳುಗಳನ್ನು ಕುಂದಾಪುರದ ವಿವಿಧ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಘಟನಾ ಸ್ಥಳಕ್ಕೆ ಗಂಗೊಳ್ಳಿ ಎಸ್.ಐ ಹರೀಶ್ ಆರ್ ಹಾಗೂ ಪೊಲೀಸ್ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ಘಟನಾ ಸ್ಥಳದಲ್ಲಿ ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯುವಲ್ಲಿ ಹಾಗೂ ಅಪಘಾತದಿಂದಾಗಿ ಉಂಟಾದ ಸಂಚಾರ ದಟ್ಟಣೆಯನ್ನು ನಿಯಂತ್ರಿಸುವಲ್ಲಿ ಸಹಕಾರಿಯಾದರು.
