Home ಕರ್ನಾಟಕ ಕರಾವಳಿ ಕಾರ್ಕಳ ನಗರ ಪೊಲೀಸ್‌ ಠಾಣೆಯ ಹೆಡ್‌ ಕಾನ್‌ಸ್ಟೇಬಲ್‌ ನಾಪತ್ತೆ: ಪತ್ನಿ ದೂರು

ಕಾರ್ಕಳ ನಗರ ಪೊಲೀಸ್‌ ಠಾಣೆಯ ಹೆಡ್‌ ಕಾನ್‌ಸ್ಟೇಬಲ್‌ ನಾಪತ್ತೆ: ಪತ್ನಿ ದೂರು

0

ಪಡುಬಿದ್ರಿ: ಕಾರ್ಕಳ ನಗರ ಪೊಲೀಸ್‌ ಠಾಣೆಯ ಹೆಡ್‌ ಕಾನ್‌ಸ್ಟೇಬಲ್‌ವೊಬ್ಬರು ನಾಪತ್ತೆಯಾಗಿರುವ ಬಗ್ಗೆ ಪಡುಬಿದ್ರಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.‌

ನಾಪತ್ತೆಯಾಗಿರುವ ಹೆಡ್‌ಕಾನ್‌ಸ್ಟೇಬಲ್‌ ಅನ್ನು ಕಾಪು ಜನಾರ್ಧನ ದೇವಸ್ಥಾನ ಬಳಿಯಿರುವ ಅಂಗಡಿಮನೆ ನಿವಾಸಿಯಾಗಿರುವ ಶೃತಿನ್‌ ಶೆಟ್ಟಿ(35) ಎಂದು ಗುರುತಿಸಲಾಗಿದೆ. ಪತಿ ಕಾಣೆಯಾಗಿರುವ ಕುರಿತು ಪತ್ನಿ ಪೂಜಾ ಶೆಟ್ಟಿಯವರು ಪಡುಬಿದ್ರಿ ಪೊಲೀಸ್‌ ಠಾಣೆಯಲ್ಲಿ ಶುಕ್ರವಾರ ನಾಪತ್ತೆ ದೂರು ದಾಖಲಿಸಿದ್ದಾರೆ. ದೂರಿನಲ್ಲಿ ಗುರುವಾರ ರಾತ್ರಿ 7:30ರ ಬಳಿಕ ಸಂಪರ್ಕಕ್ಕೆ ಸಿಗದೇ ನಾಪತ್ತೆಯಾಗಿದ್ದಾರೆ ಎಂದು ಉಲ್ಲೇಖಿಸಿದ್ದಾರೆ ಎನ್ನಲಾಗಿದೆ.

ಇನ್ನು, ಶೃತಿನ್ ಶೆಟ್ಟಿಯವರು ರಾತ್ರಿ ಪತ್ನಿಗೆ ಕರೆ ಮಾಡಿ ನಂದಿಕೂರಿನಲ್ಲಿದ್ದು, ಮನೆಗೆ ಬರುತ್ತಿರುವುದಾಗಿ ಹೇಳಿದ್ದಾರೆ. ಆದರೆ ಇದಾದ ಬಳಿಕ ಫೋನ್ ಸ್ವಿಚ್ ಆಫ್ ಆಗಿತ್ತು. ರಾತ್ರಿ ಕೂಡ ಪತಿ ಮನೆಗೆ ಬಾರದಿರುವ ಹಿನ್ನೆಲೆಯಲ್ಲಿ ಗಾಬರಿಯಾಗಿರುವ ಪತ್ನಿ ಪೂಜಾ ಶೆಟ್ಟಿಯವರು ಶುಕ್ರವಾರ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದಾರೆ. ಸದ್ಯ ಶೃತಿನ್‌ ಶೆಟ್ಟಿ ಅವರ ಮೊಬೈಲ್‌ ಕೂಡ ಸ್ವಿಚ್‌ ಆಫ್‌ ಆಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

 

LEAVE A REPLY

Please enter your comment!
Please enter your name here