ಉಡುಪಿ: ಕುಂದಾಪುರ ತಾಲೂಕಿನ ಹಕ್ಲಾಡಿ ಗ್ರಾಮದ ಅಪ್ರಾಪ್ತ ಬಾಲಕನೋರ್ವ ನಾಪತ್ತೆಯಾಗಿರುವ ಕುರಿತು ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಕ್ಲಾಡಿ ಗ್ರಾಮದ ಕಟ್ಟಿನಮಕ್ಕಿ ನಿವಾಸಿ ಅರುಣ(15) ನಾಪತ್ತೆಯಾದವರು. ಸೆಪ್ಟೆಂಬರ್ 20ರಂದು ಮನೆಯಿಂದ ಹೊರಗೆ ಹೋಗಿದ್ದ ಬಾಲಕ ಮನೆಗೆ ವಾಪಸ್ ಬಾರದೇ ನಾಪತ್ತೆಯಾಗಿದ್ದಾರೆ.
ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಗಂಗೊಳ್ಳಿ ಪೊಲೀಸ್ ಠಾಣೆಯ ಉಪನಿರೀಕ್ಷಕರು, 5 ಅಡಿ ಎತ್ತರ, ಎಣ್ಣೆ ಕಪ್ಪು ಮೈಬಣ್ಣ ಹೊಂದಿದ್ದು, ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಗಂಗೊಳ್ಳಿ ಪೊಲೀಸ್ ಠಾಣೆ ದೂ.ಸಂಖ್ಯೆ: 08254-265333, ಮೊ.ನಂ: 9480805457 ಅನ್ನು ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದ್ದಾರೆ.
