
ಸುಬ್ರಹ್ಮಣ್ಯ: ನಾಳೆ ಈ ವರ್ಷದ ಕೊನೆಯ ಚಂದ್ರಗ್ರಹಣ ಸಂಭವಿಸಲಿದ್ದು, ರಾಹುಗ್ರಸ್ತ ಚಂದ್ರ ಗ್ರಹಣ ಎಂದು ಕರೆಯಲ್ಪಡುವ ಈ ಗ್ರಹಣವು ಅಶ್ವಿನಿ ನಕ್ಷತ್ರದ ನಾಲ್ಕನೇ ಪಾದದಲ್ಲಿ ಗೋಚರಿಸುತ್ತದೆ. ಗ್ರಹಣ ಹಿನ್ನೆಲೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದಲ್ಲಿ ದೇವರ ದರ್ಶನದ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ.
ಈ ಬಗ್ಗೆ ದೇವಾಲಯದ ವತಿಯಿಂದ ಪ್ರಕಟಣೆ ಹೊರಡಿಸಲಾಗಿದ್ದು, ರಾತ್ರಿಯ ಮಹಾಪೂಜೆ ಸಾಯಂಕಾಲ ಗಂಟೆ 6.30ಕ್ಕೇ ಮುಕ್ತಾಯವಾಗಲಿದ್ದು ಬಳಿಕ ದೇವರ ದರ್ಶನ ಇರುವುದಿಲ್ಲ, ರಾತ್ರಿಯ ಭೋಜನ ಇರುವುದಿಲ್ಲ. ಸಾಯಂಕಾಲ ಆಶ್ಲೇಷಾ ಬಲಿ ಸೇವೆಯೂ ಇರುವುದಿಲ್ಲ ಎಂದು ತಿಳಿಸಿದೆ.
