
ಮಂಗಳೂರು: ಬಂಗಾಳಕೊಲ್ಲಿಯಲ್ಲಿ ಹಮೂನ್ ಚಂಡಮಾರುತ ಹಿನ್ನೆಲೆ ರಾಜ್ಯದಲ್ಲಿ ಅಕ್ಟೋಬರ್ 29ರಿಂದ ನವೆಂಬರ್ 1ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಾದ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಿ ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಅಕ್ಟೋಬರ್ 29ರಂದು ದಕ್ಷಿಣ ಒಳನಾಡಿನಲ್ಲಿ ಬರುವ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅಕ್ಟೋಬರ್ 30 ಮತ್ತು ಅಕ್ಟೋಬರ್ 31ರಂದು ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಯ ಕೆಲವು ಕಡೆ ವ್ಯಾಪಕ ಮಳೆಯಾಗಲಿದ್ದು, ಯೆಲ್ಲೊ ಅಲರ್ಟ್ ನೀಡಲಾಗಿದೆ
