
ಮಂಗಳೂರು: ಕೇರಳದ ಪ್ರಾರ್ಥನಾ ಮಂದಿರದಲ್ಲಿ ಸ್ಫೋಟ ಸಂಭವಿಸಿರುವ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.ಕೇರಳ ಗಡಿಭಾಗದಿಂದ ಮಂಗಳೂರು ಪ್ರವೇಶಿಸುವ ಸ್ಥಳಗಳು ಸೇರಿದಂತೆ ವಿವಿಧೆಡೆ ವ್ಯಾಪಕ ಬಂದೋಬಸ್ತ್ ಮಾಡಲಾಗಿದೆ.
ಕರ್ನಾಟಕ ಗಡಿ ಭಾಗದಲ್ಲಿ ಪೊಲೀಸ್ ಚೆಕ್ ಪಾಯಿಂಟ್ ಮೂಲಕ ಕೇರಳ ಮತ್ತು ಕರ್ನಾಟಕ ಪ್ರವೇಶಿಸುವ ವಾಹನಗಳ ತಪಾಸಣೆ ಮಾಡಲಾಗುತ್ತಿದೆ. ಹಿರಿಯ ಅಧಿಕಾರಿಗಳು ಚೆಕ್‌ಪೋಸ್ಟ್ ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.ಮಂಗಳೂರು ನಗರ ಕೇಂದ್ರ ಭಾಗ ಸೇರಿದಂತೆ ಪೊಲೀಸ್ ಕಮಿಷನರೆಟ್ ವ್ಯಾಪ್ತಿ, ವಿಮಾನ ನಿಲ್ದಾಣ, ಬಂದರು, ಧಾರ್ಮಿಕ ಕ್ಷೇತ್ರಗಳು, ರೈಲ್ವೇ ನಿಲ್ದಾಣದಲ್ಲಿ ಪೊಲೀಸರು ಹೆಚ್ಚಿನ ನಿಗಾ ವಹಿಸಿದ್ದಾರೆ.
