
ಬೆಳ್ತಂಗಡಿ: ಕ್ಷುಲ್ಲಕ ಕಾರಣಕ್ಕೆ ತಂದೆ ಮಗನ ನಡುವೆ ಮಾತಿನ ಚಕಮಕಿ ನಡೆದಿದ್ದು ಗಲಾಟೆ ತಾರಕಕ್ಕೇರಿ ತಂದೆಯೇ ಮಗನನ್ನು ಚೂರಿಯಿಂದ ಇರಿದು ಕೊಲೆ ಮಾಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ಕೊಡೆಕಲ್ಲು ಎಂಬಲ್ಲಿ ನಡೆದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯ ಕೊಡೆಕಲ್ಲು ನಿವಾಸಿ ಜಗದೀಶ್(30) ಮೃತ ದುರ್ದೈವಿ.
ರಾತ್ರಿ ವೇಳೆ ತಂದೆ ಮಗನ ನಡುವೆ ಗಲಾಟೆ ನಡೆದಿದ್ದು, ಈ ವೇಳೆ ಕೃಷ್ಣಯ್ಯ ಆಚಾರಿ ತನ್ನ ಕಪಾಟಿನಲ್ಲಿದ್ದ ಚೂರಿಯಿಂದ ಮಗನನ್ನು ಇರಿದಿದ್ದಾನೆ. ಆ ಕೂಡಲೇ ಜಗದೀಶ್ ಅವರನ್ನು ಮೆನಯವರೆಲ್ಲ ಸೇರಿ ಉಜಿರೆಯ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ಕೊಂಡೊಯ್ಯುವಾಗ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಇನ್ನು, ಪ್ರಕರಣ ಸಂಬಂಧ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಕೃಷ್ಣಯ್ಯ ಆಚಾರಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
