Home ಕರ್ನಾಟಕ ಕರಾವಳಿ ಬೆಂಗಳೂರು ಕಂಬಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ 1 ಕೋಟಿ ರೂ ಘೋಷಣೆ

ಬೆಂಗಳೂರು ಕಂಬಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ 1 ಕೋಟಿ ರೂ ಘೋಷಣೆ

0
ಬೆಂಗಳೂರು ಕಂಬಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ  1 ಕೋಟಿ ರೂ ಘೋಷಣೆ

ಮಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನವೆಂಬರ್‌ 25 ಮತ್ತು 26 ರಂದು ನಡೆಯುವ ಕಂಬಳಕ್ಕೆ ಸರ್ಕಾರದಿಂದ ಒಂದು ಕೋಟಿ ರೂ ಅನುದಾನ ಕೊಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೊಷಿಸಿದ್ದಾರೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೆಂಗಳೂರು ಕಂಬಳ ಸಮಿತಿ ಅಧ್ಯಕ್ಷ, ಪುತ್ತೂರು ಶಾಸಕ ಅಶೋಕ್‌ ಕುಮಾರ್‌ ರೈ ಅವರ ಸಮ್ಮುಖದಲ್ಲಿ ನಡಯುವ ಕಂಬಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಮಂತ್ರಣ ಪತ್ರಿಕೆ ಕೊಟ್ಟು ಆಹ್ವಾನಿಸಲಾಯಿತು. ಈ ವೇಳೆ ಸಮಿತಿಯವರ ಉತ್ಸಾಹ ಕಂಡು ಕಂಬಳಕ್ಕೆ ಸರ್ಕಾರದಿಂದ ಒಂದು ಕೋಟಿ ರೂ ಅನುದಾನ ನೀಡುವುದಾಗಿ ಘೋಷಿಸಿದ್ದಾರೆ. ಇದು ಕಂಬಳದ ಮೆರಗನ್ನು ಮತ್ತಷ್ಟು ಹೆಚ್ಚಿಸಿದೆ ಎಂದು ಸಮಿತಿ ಅಧ್ಯಕ್ಷರಾದ ಪುತ್ತೂರು ಶಾಸಕ ಅಶೋಕ್‌ ರೈ ತಿಳಿಸಿದ್ದಾರೆ.

ಇನ್ನು, ಬೆಂಗಳೂರಿನಲ್ಲಿ ನಡೆಯುವ ಈ ಕಂಬಳಕ್ಕೆ 100 ರಿಂದ 130 ಜೊತೆ ಕಂಬಳ ಕೋಣಗಳು ಭಾಗವಹಿಸಲಿವೆ. ಮಂಗಳೂರಿನಿಂದ ಬೆಂಗಳೂರಿಗೆ ಮೆರವಣಿಗೆ ರೂಪದಲ್ಲಿ ಲಾರಿಯಲ್ಲಿ ಎರಡು ದಿನಗಳ ಮೊದಲೇ ಕೋಣಗಳು ಬೆಂಗಳೂರಿಗೆ ಬರಲಿವೆ. ಕೋಣಗಳ ಜೊತೆಗೆ ಪಶು ವೈದ್ಯರು ಮತ್ತು ಆಂಬುಲೆನ್ಸ್‌ಗಳು ಕೂಡ ಬರಲಿವೆ. ಕಂಬಳಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವಾರು ರಾಜಕೀಯ ಗಣ್ಯರು ಹಾಗೂ ಚಿತ್ರರಂಗದ ಅನೇಕರು ಆಗಮಿಸಲಿದ್ದಾರೆ.

 

LEAVE A REPLY

Please enter your comment!
Please enter your name here