
ಉಡುಪಿ: ರಾಜ್ಯದಲ್ಲಿ ಹಿಂಗಾರು ಮಳೆಯ ಅಬ್ಬರ ಬಹಳ ಜೋರಾಗಿಯೇ ಇದೆ. ಕಳೆದ ಎರಡು ದಿನಗಳಿಂದ ಗುಡುಗು ಸಹಿತ ಭಾರೀ ಮಳೆಯಾಗುತ್ತಿದೆ. ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಸೂಚಿಸಿದೆ.
ಉಡುಪಿ ಜಿಲ್ಲೆಯಲ್ಲಿ ನವೆಂಬರ್ 7 ರವರೆಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದ್ದು, ಈ ದಿನಗಳಲ್ಲಿ ಗುಡುಗು ಸಿಡಿಲಿನೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಹಿನ್ನೆಲೆ ಜಿಲ್ಲಾ ವಿಪತ್ತು ನಿರ್ವಹಣ ಪ್ರಾಧಿಕಾರವು ಮುಂಜಾಗ್ರತಾ ಕ್ರಮವನ್ನು ಕೈಗೊಳ್ಳುವಂತೆ ಸೂಚಿಸಿದೆ.
ಇನ್ನು, ನವೆಂಬರ್ 7 ರವರೆಗೆ ಮೀನುಗಾರರಿಗೆ ಸಮುದ್ರಕ್ಕಿಳಿಯದಂತೆ ಸೂಚನೆ ನೀಡಿದೆ. ಅಲ್ಲದೇ ಸಾರ್ವಜನಿಕರು ವಿದ್ಯುತ್ ಕಂಬ, ಕಟ್ಟಡ ಹಾಗೂ ಮರಗಳ ಕೆಳಗೆ ನಿಲ್ಲದಂತೆ ತಿಳಿಸಲಾಗಿದೆ.
