
ಉಡುಪಿ: ನನ್ನನ್ನು ಪರಿಷತ್ ವಿಪಕ್ಷ ನಾಯಕನನ್ನಾಗಿ ಆಯ್ಕೆ ಮಾಡಿದಕ್ಕಾಗಿ ನಾನು ಕೇಂದ್ರದ ಮತ್ತು ರಾಜ್ಯದ ಎಲ್ಲಾ ವರಿಷ್ಠ ನಾಯಕರಿಗೆ ಧನ್ಯವಾದ ಅರ್ಪಿಸುತ್ತೇನೆ ಎಂದು ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷ ಕೊಟ್ಟ ಹುದ್ದೆಯನ್ನು ಜವಾಬ್ದಾರಿಯುತವಾಗಿ ನಿರ್ವಹಿಸುತ್ತೇನೆ. ಪಕ್ಷಕ್ಕಾಗಿ ಬಹಳಷ್ಟು ಕೆಲಸ ಮಾಡುವ ಅವಕಾಶ ಸಿಕ್ಕಿದೆ. ಈ ಹುದ್ದೆಯ ಹಿಂದಿರುವ ಸವಾಲುಗಳನ್ನು ಚೆನ್ನಾಗಿ ಅರ್ಥ ಮಾಡಿಕೊಂಡಿದ್ದೇನೆ ಎಂದು ಹೇಳಿದರು.
ರಾಜ್ಯದಲ್ಲಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುವ ವಿಶ್ವಾಸ ಇದೆ. ಲೋಕಸಭಾ ಚುನಾವಣೆಯ ಗೆಲುವು ನಮ್ಮ ಮುಂದಿನ ಗುರಿ. ರಾಜಕೀಯ ಪಕ್ಷ ಎಲ್ಲರನ್ನು ಒಳಗೊಂಡ ಸಂಘಟನೆ ಕಟ್ಟಬೇಕಾಗುತ್ತದೆ. ಪಕ್ಷದ ನೆಲೆಯಲ್ಲಿ ಜನಸಾಮಾನ್ಯರ ಪರವಾಗಿ ಕೆಲಸ ಮಾಡುತ್ತೇನೆ ಎಂದರು.
