Home ಕರ್ನಾಟಕ ಕರಾವಳಿ ಉಡುಪಿ ಪರ್ಯಾಯಕ್ಕೆ ತಡೆಯೊಡ್ಡಿ ನೀಡಿದ್ದ ಅರ್ಜಿ ವಜ

ಉಡುಪಿ ಪರ್ಯಾಯಕ್ಕೆ ತಡೆಯೊಡ್ಡಿ ನೀಡಿದ್ದ ಅರ್ಜಿ ವಜ

0
ಉಡುಪಿ ಪರ್ಯಾಯಕ್ಕೆ ತಡೆಯೊಡ್ಡಿ ನೀಡಿದ್ದ ಅರ್ಜಿ ವಜ

ಬೆಂಗಳೂರು: ಉಡುಪಿ ಪರ್ಯಾಯ ಮಹೋತ್ಸವಕ್ಕೆ ತಡೆ ನೀಡಬೇಕು ಎಂದು ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಸೋಮವಾರ ವಜಾಗೊಳಿಸಿದೆ.

ಈ ಬಾರಿ ಪರ್ಯಾಯ ಪೀಠವೇರಲಿರುವ ಪುತ್ತಿಗೆ ಶ್ರೀಗಳು ಸಮುದ್ರೋಲ್ಲಂಘನೆ ಮಾಡಿ ವಿದೇಶಕ್ಕೆ ಪ್ರಯಾಣಿಸಿ ಸಂಪ್ರದಾಯ ಉಲ್ಲಂಘಿಸಿದ್ದಾರೆ ಹೀಗಾಗಿ ಅವರಿಗೆ ಪರ್ಯಾಯ ನೀಡದಂತೆ ಕೋರಿ ಗುರುರಾಜ ಜೀವನರಾವ್ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿಯ ಕುರಿತು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ, ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್‌ ಅವರಿದ್ದ ಪೀಠ, ವಿದೇಶದಲ್ಲಿ ಜ್ಞಾನ ಪ್ರಸಾರ ಮಾಡಿದರೆ ತಪ್ಪೇನು ಎಂದು ಪ್ರಶ್ನಿಸಿದೆ. ಅಲ್ಲದೇ ಧಾರ್ಮಿಕ ಆಚರಣೆ ವಿಚಾರದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಹೇಳಿ, ಅರ್ಜಿಯನ್ನು ವಜಾಗೊಳಿಸಿದೆ. ಪುತ್ತಿಗೆ ಶ್ರೀಗಳ ಪರ್ಯಾಯ ಮಹೋತ್ಸವ ಜನವರಿ 17-18ರಂದು ನಡೆಯಲಿದೆ.

 

LEAVE A REPLY

Please enter your comment!
Please enter your name here