Home ಕರ್ನಾಟಕ ಕರಾವಳಿ ಅಯೋಧ್ಯೆ ರಾಮ‌ ಮಂದಿರ 140 ಕೋಟಿ ಜನರದ್ದು: ಲಕ್ಷ್ಮೀ ಹೆಬ್ಬಾಳ್ಕರ್

ಅಯೋಧ್ಯೆ ರಾಮ‌ ಮಂದಿರ 140 ಕೋಟಿ ಜನರದ್ದು: ಲಕ್ಷ್ಮೀ ಹೆಬ್ಬಾಳ್ಕರ್

0
ಅಯೋಧ್ಯೆ ರಾಮ‌ ಮಂದಿರ 140 ಕೋಟಿ ಜನರದ್ದು: ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ: ರಾಮಮಂದಿರ ನಿರ್ಮಾಣಕ್ಕೆ ನಾನು ದೇಣಿಗೆ ನೀಡಿದ್ದೇನೆ. ರಾಮ- ಕೃಷ್ಣ, ಪರಮೇಶ್ವರನ ಮೇಲೆ ನನಗೆ ಬಹಳ ಭಕ್ತಿ ಇದೆ. ಮುಂದಿನ ದಿನಗಳಲ್ಲಿ ಅಯೋಧ್ಯೆಗೆ ಭೇಟಿ ನೀಡುವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಹೇಳಿದ್ದಾರೆ.

ನಾನು ನಮ್ಮ ಸಂಸ್ಕೃತಿ, ಭಕ್ತಿಯನ್ನು ಆಚರಿಸುತ್ತೇನೆ. ರಾಮಮಂದಿರ ವಿಚಾರದಲ್ಲಿ ಪಕ್ಷದ ನಡೆಯ ಬಗ್ಗೆ ನಾನು ಮಾತನಾಡಲ್ಲ. ನಾನು ಪಕ್ಷದ ಅಧ್ಯಕ್ಷೆ ಅಲ್ಲ ಅಥವಾ ದೊಡ್ಡ ಸ್ಥಾನದಲ್ಲೂ ಇಲ್ಲ. ನಾನು ದೈವೀ ಭಕ್ತಳು ಎಂದು ಪದೇ ಪದೇ ಹೇಳುತ್ತೇನೆ ಎಂದರು.

ರಾಮ ಮಂದಿರಕ್ಕೆ ಒಂದಲ್ಲ ಒಂದು ದಿನ ಹೋಗಿಯೇ ಹೋಗುತ್ತೇನೆ. ರಾಮ ಮಂದಿರ ಅವರದ್ದೂ ಅಲ್ಲ ನಮ್ಮದೂ ಅಲ್ಲ. ಅಯೋಧ್ಯಾ ರಾಮ ಮಂದಿರ 140 ಕೋಟಿ ಜನರದ್ದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

 

LEAVE A REPLY

Please enter your comment!
Please enter your name here