
ಉಡುಪಿ: ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠೆಯ ಹಿನ್ನೆಲೆಯಲ್ಲಿ ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಐದು ರಥಗಳ ಉತ್ಸವ ವಿಜೃಂಭಣೆಯಿಂದ ನಡೆಯಿತು.
ಬ್ರಹ್ಮರಥ, ಚಿನ್ನದ ರಥ, ಮಹಾಪೂಜಾ ರಥ, ಬೆಳ್ಳಿರಥ, ನವರತ್ನದ ರಥಗಳಿಂದ ಪ್ರದಕ್ಷಿಣೆ ನಡೆಯಿತು. ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಹಾಗೂ ಸುಶ್ರೀಂದ್ರ ತೀರ್ಥ ಸ್ವಾಮೀಜಿ ಅವರು ಹಾಗೂ ಸಾವಿರಾರು ಮಂದಿ ಭಕ್ತರು ಈ ಉತ್ಸವದಲ್ಲಿ ಭಾಗವಹಿಸಿದ್ದರು.
