
ಬೆಳ್ತಂಗಡಿ: ಬೆಳ್ತಂಗಡಿಯ ಸುಡುಮದ್ದು ತಯಾರಿಕಾ ಘಟವೊಂದರಲ್ಲಿ ಭಾರೀ ಸ್ಪೋಟ ಉಂಟಾಗಿ ಮೂವರು ಸಾವನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ನಡೆದಿದೆ.
ತಾಲೂಕಿನ ವೇಣೂರು ಸಮೀಪದ ಕುಕ್ಕೇಡಿ ಪಂಚಾಯತ್ ವ್ಯಾಪ್ತಿಯಲ್ಲಿ ಈ ಅನಾಹುತ ಸಂಭವಿಸಿದೆ. ಇಲ್ಲಿ 9 ಮಂದಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
photo credit – Freepik
