Home ಕರ್ನಾಟಕ ಕರಾವಳಿ ಪುರಂದರದಾಸರ ಆರಾಧನೆ ಪ್ರಯುಕ್ತ ಪರ್ಯಾಯ ಪುತ್ತಿಗೆ ಮಠದಿಂದ ಶತಕಂಠ ಗಾಯನ

ಪುರಂದರದಾಸರ ಆರಾಧನೆ ಪ್ರಯುಕ್ತ ಪರ್ಯಾಯ ಪುತ್ತಿಗೆ ಮಠದಿಂದ ಶತಕಂಠ ಗಾಯನ

0
ಪುರಂದರದಾಸರ ಆರಾಧನೆ ಪ್ರಯುಕ್ತ ಪರ್ಯಾಯ ಪುತ್ತಿಗೆ ಮಠದಿಂದ ಶತಕಂಠ ಗಾಯನ

ಉಡುಪಿ: ಶ್ರೀ ಪುರಂದರದಾಸರ ಆರಾಧನೆ ಪ್ರಯುಕ್ತ ಪರ್ಯಾಯ ಪುತ್ತಿಗೆ ಮಠದ ಆಶ್ರಯದಲ್ಲಿ ಶತಕಂಠ ಗಾಯನ ಕಾರ್ಯಕ್ರಮವನ್ನು ಶುಕ್ರವಾರ ರಾಜಾಂಗಣದಲ್ಲಿ ಆಯೋಜಿಸಲಾಯಿತು.

ಸುಗುಣ ಶ್ರೀ ಭಜನಾ ಮಂಡಳಿಯ ಶಾಂತ ಹೆಬ್ಬಾರ್ ಅವರ ನೇತೃತ್ವದಲ್ಲಿ, ರತ್ನ ಸಂಜೀವ ಕಲಾ ಮಂಡಲ ಸರಳೇಬೆಟ್ಟು ಇದರ ಸಂಯುಕ್ತ ಆಶ್ರಯದಲ್ಲಿ ಸುಮಾರು 600 ಮಹಿಳೆಯರು 3 ಗಂಟೆಗಳ ಕಾಲ ಶ್ರೀ ಪುರಂದರದಾಸರ ಕೀರ್ತನೆಗಳನ್ನು ಹಾಡಿದರು.

ಪರ್ಯಾಯ ಪುತ್ತಿಗೆ ಶ್ರೀಗಳಾದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಆಶೀರ್ವಚ ನೀಡಿದರು. ಶ್ರೀ ಮಾಧವತೀರ್ಥ ಸಂಸ್ಥಾನದ ಕಿರಿಯ ಪೀಠಾಧೀಶರು ಉಡುಪಿ ಶ್ರೀ ಕೃಷ್ಣ ದೇವರ ದರ್ಶನ ಪಡೆದರು. ಪರ್ಯಾಯ ಪುತ್ತಿಗೆ ಮಠದ ಉಭಯ ಶ್ರೀಗಳು ಸ್ವಾಗತಿಸಿ ಚಂದ್ರ ಶಾಲೆಯಲ್ಲಿ ಸಂಸ್ಥಾನ ಗೌರವ ನೀಡಿದರು. ನೂರಾರು ಭಕ್ತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಶ್ರೀ ಪುರಂದರದಾಸರ ಆರಾಧನಾ ಮಹೋತ್ಸವದ ಅಂಗವಾಗಿ ಹಿಂದುಸ್ಥಾನಿ ಗಾಯಕ ಪ್ರದೀಪ್ ಸಪ್ತಸ್ವರ ಕುಕ್ಕುಡೆ ಮತ್ತು ಬಳಗದವರಿಂದ ಭಕ್ತಿ ಸಂಗೀತ ಕಾರ್ಯಕ್ರಮ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ನೆರವೇರಿತು.

ಶ್ರೀ ಪುರಂದರದಾಸರ ಕೀರ್ತನೆಗಳ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ಮಾಡಲಾಯಿತು.

 

LEAVE A REPLY

Please enter your comment!
Please enter your name here