Home ಸುದ್ದಿಗಳು ರಾಜ್ಯ ರಾಜ್ಯಸಭೆಗೆ ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಆಯ್ಕೆ

ರಾಜ್ಯಸಭೆಗೆ ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಆಯ್ಕೆ

0
ರಾಜ್ಯಸಭೆಗೆ ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಆಯ್ಕೆ

ಹೊಸದಿಲ್ಲಿ: ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಅವರನ್ನು ರಾಜ್ಯಸಭೆಗೆ ಆಯ್ಕೆ ಮಾಡಲಾಗಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಜ್ಯಸಭೆ ಸ್ಥಾನಕ್ಕೆ ಸುಧಾಮೂರ್ತಿ ಅವರ ಹೆಸರನ್ನು ನಾಮನಿರ್ದೇಶನ ಮಾಡಿದ್ದಾರೆ. ಇನ್ನು ಈ ಬಗ್ಗೆ ದೇಶದ ಪ್ರದಾನಿ ಮೋದಿ ಅವರು ಸಂತಸ ವ್ಯಕ್ತಪಡಿಸಿದ್ದಾರೆ.

ಶುಕ್ರವಾರ ಮಹಿಳಾ ದಿನಾಚರಣೆಯಂದೇ ಘೋಷಣೆಯಾಗಿದ್ದು, ರಾಜ್ಯಸಭೆಯಲ್ಲಿ ಸುಧಾ ಮೂರ್ತಿ ಅವರ ಹಾಜರಿಯು ನಮ್ಮ ‘ನಾರಿ ಶಕ್ತಿ’ಗೆ ಪ್ರಭಾವಯುತ ಸಾಕ್ಷಿಯಾಗಲಿದೆ ಎಂದು ಬಣ್ಣಿಸಿದ್ದಾರೆ.

ಭಾರತದ ರಾಷ್ಟ್ರಪತಿ ಅವರು ಸುಧಾಮೂರ್ತಿ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿರುವುದು ನನಗೆ ಆನಂದ ಉಂಟುಮಾಡಿದೆ. ಸಮಾಜ ಸೇವೆ, ಲೋಕೋಪಕಾರ ಹಾಗೂ ಶಿಕ್ಷಣ ಸೇರಿದಂತೆ ವಿಭಿನ್ನ ಕ್ಷೇತ್ರಗಳಲ್ಲಿನ ಸುಧಾ ಮೂರ್ತಿ ಅವರ ಕೊಡುಗೆ ಅಪಾರ ಹಾಗೂ ಸ್ಫೂರ್ತಿದಾಯಕ” ಎಂದು ಮೋದಿ ತಿಳಿಸಿದ್ದಾರೆ.

 

LEAVE A REPLY

Please enter your comment!
Please enter your name here