
ಉಡುಪಿ: ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಕೆ.ಜಯಪ್ರಕಾಶ ಹೆಗ್ಡೆ ಅವರು ಎ.3ರಂದು ಬೆಳಿಗ್ಗೆ 11 ಗಂಟೆಗೆ ಮಣಿಪಾಲದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ.
ಬುಧವಾರ ಬೆಳಗ್ಗೆ 10 ಕ್ಕೆ ಉಡುಪಿಯ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಜಿಲ್ಲೆಯ ಪ್ರಮುಖ ಕಾರ್ಯಕರ್ತರ ಹಾಗೂ ಪ್ರಮುಖರ ಸಭೆ ನಡೆಯಲಿದೆ. ಬಳಿಕ ಪಕ್ಷದ ಪ್ರಮುಖರೊಂದಿಗೆ ಚುನಾವಣಾಧಿಕಾರಿಗಳ ಕಚೇರಿಗೆ ತೆರಳುವ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ ಅವರು ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಕೆ.ಜಯಪ್ರಕಾಶ್ ಹೆಗ್ಡೆ ಅವರ ಕಚೇರಿ ಪ್ರಕಟನೆ ತಿಳಿಸಿದೆ.
