ಬೆಂಗಳೂರು: ಕಳೆದ ಲೋಕಸಭಾ ಚುನಾವಣೆಯಲ್ಲಿ ಸುಮಲತಾಗೆ ಬೆಂಬಲ ನೀಡಿದ್ದೆವು. ಈ ಬಾರಿ ಚುನಾವಣಾ ಪ್ರಚಾರಕ್ಕೆ ಸಂಸದೆ ಸುಮಲತಾರನ್ನು ಬಳಸಿಕೊಳ್ಳುತ್ತೇವೆ. ಸಂಸದೆ ಸುಮಲತಾ ಪ್ರಭಾವ ಬಳಸಿಕೊಂಡು ಮಂಡ್ಯ, ಮೈಸೂರು ಗೆಲ್ಲುತ್ತೇವೆ ಎಂದು ಅಶೋಕ್ ಹೇಳಿದರು.
ಜೆಡಿಎಸ್ ಹಾಗೂ ಬಿಜೆಪಿ ತಳಮಟ್ಟದಿಂದಲೇ ಹೊಂದಾಣಿಕೆ ಆಗಬೇಕು. ಈ ಬಗ್ಗೆ ಮೊನ್ನೆ ಬೆಂಗಳೂರಿಗೆ ಬಂದಾಗ ಕೇಂದ್ರ ಸಚಿವ ಅಮಿತ್ ಶಾ ಕೂಡ ತಿಳಿಹೇಳಿದ್ದಾರೆ. ಬೀದರ್ನಲ್ಲಿಯೂ ಅಸಮಾಧಾನ ಶಮನವಾಗಿದೆ, ಎಲ್ಲರೂ ಒಗ್ಗಟ್ಟಾಗಿದ್ದೇವೆ. ರಾಜ್ಯದ ಎಲ್ಲಾ ಕಡೆ ಸಮನ್ವಯ ಸಮಿತಿ ಸಭೆ ಮಾಡುತ್ತಿದ್ದೇವೆ. ಜೆಡಿಎಸ್ ಹಾಗೂ ಬಿಜೆಪಿ ಹಾಲು ಜೇನಿನಂತೆ ಒಗ್ಗೂಡುತ್ತಿದ್ದೇವೆ ಎಂದು ಅಶೋಕ್ ಹೇಳಿದರು.
