Home ಕರ್ನಾಟಕ ಕರಾವಳಿ ಸಾಮಾಜಿಕ ಜಾಲತಾಣದ ಮೂಲಕ ಮೋದಿ ಸಾಧನೆಗಳನ್ನು ಜನತೆಗೆ ತಲುಪಿಸಬೇಕು: ಉದಯ ಕುಮಾರ್ ಶೆಟ್ಟಿ

ಸಾಮಾಜಿಕ ಜಾಲತಾಣದ ಮೂಲಕ ಮೋದಿ ಸಾಧನೆಗಳನ್ನು ಜನತೆಗೆ ತಲುಪಿಸಬೇಕು: ಉದಯ ಕುಮಾರ್ ಶೆಟ್ಟಿ

0
ಸಾಮಾಜಿಕ ಜಾಲತಾಣದ ಮೂಲಕ ಮೋದಿ ಸಾಧನೆಗಳನ್ನು ಜನತೆಗೆ ತಲುಪಿಸಬೇಕು: ಉದಯ ಕುಮಾರ್ ಶೆಟ್ಟಿ

ಉಡುಪಿ: ನಮ್ಮ ಸಾಮಾಜಿಕ ಜಾಲತಾಣ ಸದಸ್ಯರು ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಮಾಡಿದಂತಹ ಸಾಧನೆಗಳನ್ನು ಪ್ರತಿಯೊಬ್ಬರಿಗೂ ತಲುಪಿಸುವ ಕೆಲಸ ಮಾಡಬೇಕು ಎಂದು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ವಿಭಾಗ ಪ್ರಭಾರಿ ಉದಯ ಕುಮಾರ್ ಶೆಟ್ಟಿ‌ ಹೇಳಿದರು.

ಅವರು ಉಡುಪಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ ಸಾಮಾಜಿಕ ಜಾಲತಾಣ ಕಾರ್ಯಾಗಾರದಲ್ಲಿ ಮಾತನಾಡಿದರು.

ಈ ವೇಳೆ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಮಾತನಾಡಿ, ಎಂಥ ವಿಚಾರಗಳನ್ನ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಬೇಕು ಎನ್ನುವ ಬಗ್ಗೆ ಮಾರ್ಗದರ್ಶನ ನೀಡಿ ಇನ್ನುಳಿದ ಬೆರಳೆಣಿಕೆಯ ದಿನದಲ್ಲಿ ಸಮರೋಪಾದಿಯಲ್ಲಿ ಕೆಲಸ ಮಾಡಲು ನೆರೆದಿದ್ದ ಕಾರ್ಯಕರ್ತರಿಗೆ ಕರೆ ನೀಡಿದರು.

ಈ ಸಂದರ್ಭದಲ್ಲಿ ರಾಜ್ಯ ಸಾಮಾಜಿಕ ಜಾಲತಾಣ ಸಂಚಾಲಕರಾದ ಪ್ರಶಾಂತ್ ಮಾಕನೂರು, ಸಹಸಂಚಾಲಕರಾದ ಪ್ರದೀಪ್ ಕದಡಿ, ರಾಜ್ಯ ಸಮಿತಿ ಸದಸ್ಯರಾದ ಅಕ್ಷಯ್ ರೈ ಹಾಗೂ ನಿಕಟಪೂರ್ವ ಸಾಮಾಜಿಕ ಜಾಲತಾಣ ಸಂಚಾಲಕರಾದ ವಿಕಾಸ್ ಪುತ್ತೂರು ಹಾಗು ಜಿಲ್ಲಾ ಸಾಮಾಜಿಕ ಜಾಲತಾಣ ಸಂಚಾಲಕರಾದ ಸುದೀಪ್ ನಿಟ್ಟೆ, ವಿಕಾಸ್ ಪುತ್ತೂರು ಉಪಸ್ಥಿತರಿದ್ದರು.

 

LEAVE A REPLY

Please enter your comment!
Please enter your name here