
ತುಮಕೂರು: ಲೋಕಸಭಾ ಕ್ಷೇತ್ರದ ಬಿಜೆಪಿ- ಜೆಡಿಎಸ್ ಮೈತ್ರಿ ಅಭ್ಯರ್ಥಿ ವಿ.ಸೋಮಣ್ಣ ಇಂದು ಕೋತಿತೋಪು, ಹುರುಳಿತೋಟ, ಶಿರಾಗೇಟ್, ಚಿಕ್ಕಪೇಟೆ, ಕೋಡಿಬಸವಣ್ಣ ದೇವಸ್ಥಾನ, ಎನ್.ಆರ್.ಕಾಲೊನಿ, ಸರಸ್ವತಿಪುರಂ ಪ್ರದೇಶಗಳಲ್ಲಿ ಸಾರ್ವಜನಿಕರನ್ನು ಭೇಟಿ ಮಾಡಿ ಮತಯಾಚಿಸಿದರು.
ಈ ವೇಳೆ ಶಾಸಕ ಜಿ.ಬಿ.ಜ್ಯೋತಿಗಣೇಶ್, ಸಿದ್ಧಗಂಗಾ ಆಸ್ಪತ್ರೆಯ ನಿರ್ದೇಶಕ ಡಾ.ಎಸ್.ಪರಮೇಶ್ ಇತರೆ ಮುಖಂಡರು ಭಾಗವಹಿಸಿದ್ದರು. ಜೊತೆಗೆ ಪಕ್ಷದ ಕಾರ್ಯಕರ್ತರು, ಪದಾಧಿಕಾರಿಗಳು ಪಾಲ್ಗೊಂಡಿದ್ದರು.
