Home ಸುದ್ದಿಗಳು ರಾಷ್ಟ್ರೀಯ ಮಗಳು ಬದುಕಿರುವಾಗಲೇ ಶ್ರದ್ಧಾಂಜಲಿ ಫ್ಲೆಕ್ಸ್ ಹಾಕಿ ಕಣ್ಣೀರಿಟ್ಟ ಕುಟುಂಬಸ್ಥರು

ಮಗಳು ಬದುಕಿರುವಾಗಲೇ ಶ್ರದ್ಧಾಂಜಲಿ ಫ್ಲೆಕ್ಸ್ ಹಾಕಿ ಕಣ್ಣೀರಿಟ್ಟ ಕುಟುಂಬಸ್ಥರು

0
ಮಗಳು ಬದುಕಿರುವಾಗಲೇ ಶ್ರದ್ಧಾಂಜಲಿ ಫ್ಲೆಕ್ಸ್ ಹಾಕಿ ಕಣ್ಣೀರಿಟ್ಟ ಕುಟುಂಬಸ್ಥರು

ಹೈದರಾಬಾದ್​: ತನ್ನ ಇಚ್ಛೆಗೆ ವಿರುದ್ಧವಾಗಿ ಮಗಳು ಮದುವೆಯಾಗಿದ್ದಕ್ಕೆ ಮಗಳು ಬದುಕಿರುವಾಗಲೇ ಆಕೆಯ ಶ್ರದ್ಧಾಂಜಲಿ ಫ್ಲೆಕ್ಸ್​ ಅಳವಡಿಸಿ, ಕುಟುಂಬವೇ ಕಣ್ಣೀರಿಟ್ಟಿರುವ ವಿಡಿಯೋ ಇದೀಗ ಎಲ್ಲೆಡೆ ವೈರಲ್​ ಆಗುತ್ತಿದೆ.

ತೆಲಂಗಾಣದ ರಾಜಣ್ಣ ಸಿರಿಸಿಲ್ಲಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಇಷ್ಟವಿಲ್ಲದಿದ್ದರೂ ಮಗಳು ಚಿಲುವೆರಿ ಅನುಷಾ ಪ್ರೇಮ ವಿವಾಹವಾಗಿರುವುದು ತಂದೆ ಮತ್ತು ತಾಯಿಯ ಆಕ್ರೋಶಕ್ಕೆ ಕಾರಣವಾಗಿದೆ. ಹೀಗಾಗಿ ಮಗಳು ಜೀವಂತವಾಗಿರುವಾಗಲೇ ಮನೆಯ ಮುಂದೆ ಶ್ರದ್ಧಾಂಜಲಿ ಫ್ಲೆಕ್ಸ್​ ಅಳವಡಿಸಿ, ಜನನ ಮತ್ತು ಮರಣದ ದಿನಾಂಕವನ್ನು ಬರೆಸಿ, ಫ್ಲೆಕ್ಸ್​ ಮುಂದೆ ಕುಟುಂಬ ಗೊಳೋ ಎಂದು ಅಳುತ್ತಿರುವ ದೃಶ್ಯ ವಿಡಿಯೋದಲ್ಲಿದೆ.

 

LEAVE A REPLY

Please enter your comment!
Please enter your name here