
ಮಂಗಳೂರು: ಅಕ್ರಮ ಪಿಸ್ತೂಲ್ ಹೊಂದಿದ್ದ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿರುವ ಘಟನೆ ಉಳ್ಳಾಲ ತಾಲೂಕು ತಲಪಾಡಿ ಗ್ರಾಮದ ಪಿಲಿಕೂರು ಎಂಬಲ್ಲಿ ನಡೆದಿದೆ.
ಬಂಧಿತರನ್ನು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ಮೊಹಮ್ಮದ್ ಅಸ್ಕರ್(26) ಮತ್ತು ಅಬ್ದುಲ್ ನಿಸಾರ್.ಕೆ(29) ಎಂದು ಗುರುತಿಸಲಾಗಿದೆ.
ಬಂಧಿತರು ಯಾವುದೋ ದುಷ್ಕೃತ್ಯ ನಡೆಸುವುದಕ್ಕಾಗಿ ಪರವಾನಿಗೆ ಇಲ್ಲದ ಪಿಸ್ತೂಲ್ ಇಟ್ಟುಕೊಂಡು ಕಪ್ಪು ಬಣ್ಣದ ಕಾರಿನಲ್ಲಿ ಪಿಲಿಕೂರಿನಲ್ಲಿ ತಿರುಗಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿಯ ಮೇರೆಗೆ ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತರಿಂದ ಪಿಸ್ತೂಲ್, ಸಜೀವ ಮದ್ದುಗುಂಡುಗಳು, ಮೊಬೈಲ್ ಫೋನ್ ಹಾಗೂ ಬಣ್ಣದ ಕಾರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಒಟ್ಟು ಅಂದಾಜು ರೂ.7,15,000 ರೂ ಮೌಲ್ಯದ ಸೊತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
