
ಮಂಗಳೂರು: ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಪರಿಷತ್ ಚುನಾವಣೆಯು ಈಗಾಗಲೇ ಆರಂಭಗೊಂಡಿದ್ದು, ಬೆಳಿಗ್ಗೆ 8 ಗಂಟೆಯಿಂದಲೇ ಕರಾವಳಿ ಜಿಲ್ಲೆಗಳಲ್ಲಿ ಮತದಾನ ನಡೆಯುತ್ತಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪದವೀಧರರ ಕ್ಷೇತ್ರದಲ್ಲಿ 24 ಹಾಗೂ ಶಿಕ್ಷಕರ ಕ್ಷೇತ್ರಕ್ಕೆ ಎಲ್ಲಾ ತಾಲೂಕು ಕಚೇರಿಗಳಲ್ಲಿ ಸೇರಿ 16 ಕಡೆಗಳಲ್ಲಿ ಮತದಾನ ಕೇಂದ್ರ ಸ್ಥಾಪಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಡವೀದರರ ಕ್ಷೇತ್ರದಲ್ಲಿ ಒಟ್ಟು 19,971 ಮತದಾರರು ಇದ್ದು, ಶಿಕ್ಷಣ ಕ್ಷೇತ್ರದಲ್ಲಿ ಒಟ್ಟು 9,189 ಮತದಾರರು ಇದ್ದಾರೆ.
ಇನ್ನು ಉಡುಪಿ ಜಿಲ್ಲೆಯಲ್ಲಿ 10ಕಡೆಗಳಲ್ಲಿ ಮತದಾನ ನಡೆಯುತ್ತಿದ್ದು ಪದವೀದರರ ಕ್ಷೇತ್ರದಲ್ಲಿ ಒಟ್ಟು17,033 ಮತದಾರರು ಇದ್ದು, ಶಿಕ್ಷಕರ ಕ್ಷೇತ್ರದಲ್ಲಿ ಒಟ್ಟು 4,067 ಮತದಾರರು ಇದ್ದಾರೆ. ಪದವೀಧರರ ಕ್ಷೇತ್ರದಲ್ಲಿ ಒಟ್ಟು 10 ಅಭ್ಯರ್ಥಿಗಳು ಹಾಗೂ ಶಿಕ್ಷಣ ಕ್ಷೆದ್ರಲ್ಲಿ ಒಟ್ಟು 8ಅಭ್ಯರ್ಥಿಗಳು ಕಣಕ್ಕೆ ಇಳಿದಿದ್ದಾರೆ.
